
2013 ಡಿ. 26ರಂದು ಗಿನಿಯ ಎಂಬ ಕಪ್ಪು ರಾಷ್ಟ್ರದ ಮೆಲಿಯಂಡು ಗ್ರಾಮದಲ್ಲಿ 2 ವರ್ಷದ ಮಗುವನ್ನು ಬಲಿ ಪಡೆಯುವುದರೊಂದಿಗೆ ಎಬೋಲವು ನಾಗರಿಕ ಜಗತ್ತಿಗೆ ಪ್ರವೇಶಿಸಿತು. ನಿಜವಾಗಿ, ಮೆಲಿಯಂಡು ಎಂಬುದು ಕಾಡುಗಳಿಂದ ಆವೃತ್ತವಾದ ಪ್ರದೇಶ. ಆಫ್ರಿಕನ್ ಖಂಡದ ಈ ರಾಷ್ಟ್ರದಲ್ಲಿ ಹೇರಳವಾದ ಗಣಿಸಂಪತ್ತು ಇದೆ. ಬೆಲೆಬಾಳುವ ಮರಮುಟ್ಟುಗಳಿವೆ. ಈ ಎರಡು ಸಂಪತ್ತುಗಳು ಗಿನಿಯವನ್ನು ರಾಜಕೀಯ ಅಸ್ಥಿರತೆಗೆ ತಳ್ಳಿದುವು. ನಾಗರಿಕ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟವು. ಬಹುರಾಷ್ಟ್ರೀಯ ಕಂಪೆನಿಗಳು ಇಲ್ಲಿನ ಪ್ರಾಕೃತಿಕ ಸಂಪತ್ತಿನ ಮೇಲೆ ಯಾವ ರೀತಿಯಲ್ಲಿ ಮುಗಿಬಿದ್ದುವೆಂದರೆ, ಅಲ್ಲಿನ ಭೌಗೋಳಿಕ ರಚನೆಯೇ ಬದಲಾದುವು. ಟಿಂಬರ್ ಮತ್ತು ಮೈನಿಂಗ್ ಕಂಪೆನಿಗಳು ಗಿನಿಯದ ಕಾಡು ಪ್ರದೇಶವನ್ನು ಬಂಜರು ಮಾಡತೊಡಗಿದುವು. ಇದರಿಂದಾಗಿ ಕಾಡುಪ್ರಾಣಿಗಳು ನೆಲೆ ಕಳಕೊಂಡವಲ್ಲದೇ ಅವು ನಾಗರಿಕ ಜಗತ್ತನ್ನು ಪ್ರವೇಶಿಸಿದುವು. ಮುಖ್ಯವಾಗಿ, ರೋಗಾಣುಗಳನ್ನು ಹೊತ್ತೊಯ್ಯಬಲ್ಲಂತಹ ಬಾವಲಿಗಳು (Fruit bats) ಜನವಾಸ ಪ್ರದೇಶಕ್ಕೆ ನುಗ್ಗಿದುವು. ಅಲ್ಲದೇ ಮೊಲ ಮುಂತಾದ ಕಾಡು ಪ್ರಾಣಿಗಳು ನೆಲೆ ಕಳೆದುಕೊಂಡು ಬೇಟೆಗಾರರಿಗೆ ಸುಲಭ ತುತ್ತಾದುವು. ಹೀಗೆ ಕಾಡಿಗೆ ಸೀಮಿತವಾಗಿದ್ದ ಅಥವಾ ಪ್ರಾಣಿಗಳ ಮಧ್ಯೆ ಹರಡಿಕೊಂಡಿದ್ದ ರೋಗವೊಂದು ಮನುಷ್ಯನ ಅತಿಕ್ರಮಣದಿಂದಾಗಿ ನಾಡಿಗೆ ಕಾಲಿಟ್ಟಿತು. ವೈರಸ್ ತಗುಲಿಸಿಕೊಂಡ ಕಾಡು ಪ್ರಾಣಿಗಳನ್ನು ಬೇಟೆಯಾಡಿ ತಿಂದ ಮೆಲಿಯಂಡು ಪ್ರದೇಶದ ಮಂದಿ ಈ ರೋಗದ ಮೊದಲ ಗ್ರಾಹಕರಾದರು.
ದುರಂತ ಏನೆಂದರೆ, ಆಫ್ರಿಕನ್ ಖಂಡದ ಬಡರಾಷ್ಟ್ರಗಳ ವಿಫುಲ ಪ್ರಾಕೃತಿಕ ಸಂಪತ್ತನ್ನು ಮುಗಿಬಿದ್ದು ಕೊಳ್ಳೆ ಹೊಡೆಯುತ್ತಿರುವ ಯಾವ ರಾಷ್ಟ್ರಗಳೂ ಇವತ್ತು ಎಬೋಲದ ಬಗ್ಗೆ ಮಾತಾಡುತ್ತಿಲ್ಲ. ಅಲ್ಲಿನ ಪ್ರಾಕೃತಿಕ ಸಂಪತ್ತಿಗೆ ಬದಲಾಗಿ ಎಬೋಲವನ್ನು ಉಡುಗೊರೆಯಾಗಿ ಕೊಟ್ಟ ಅವುಗಳು ಇವತ್ತು ಎಬೋಲಕ್ಕೆ ಮದ್ದು ಹುಡುಕುವ ಮತ್ತು ಆ ಮೂಲಕ ಮತ್ತೆ ಅವೇ ರಾಷ್ಟ್ರಗಳಿಂದ ದುಡ್ಡು ದೋಚುವ ಉಮೇದಿನಲ್ಲಿವೆ. ಏಡ್ಸನ್ನು ಲಾಭದಾಯಕ ಉದ್ಯಮವಾಗಿ ಮಾಡಿಕೊಂಡಿದ್ದೂ ಇವೇ
ರಾಷ್ಟ್ರಗಳು. ಬಲಾಢ್ಯ ರಾಷ್ಟ್ರಗಳು ತಮ್ಮ ಲ್ಯಾಬೋರೇಟರಿಗಳಲ್ಲಿ ಏಡ್ಸ್ ವೈರಸನ್ನು ಸೃಷ್ಟಿಸಿ ಅದನ್ನು ಆಫ್ರಿಕನ್ ರಾಷ್ಟ್ರಗಳ ಮೇಲೆ ಪ್ರಯೋಗಿಸಿವೆ ಎಂಬ ವಾದದಲ್ಲಿ ನಂಬಿಕೆ ಇಟ್ಟವರು ಆಫ್ರಿಕದಲ್ಲಿ ಈಗಲೂ ಇದ್ದಾರೆ. ಆದ್ದರಿಂದಲೇ, ಎಬೋಲಕ್ಕೆ ಬಲಾಢ್ಯ ರಾಷ್ಟ್ರಗಳೇ ಹೊಣೆ ಎಂದು ಆರೋಪಿಸಿ ಆ ಖಂಡದಲ್ಲಿ ಪ್ರತಿಭಟನೆಗಳು ನಡೆದದ್ದು, ಪಾಶ್ಚಾತ್ಯ ರಾಷ್ಟ್ರಗಳ ಲ್ಯಾಬೋರೇಟರಿಯಲ್ಲಿ ಎಬೋಲವನ್ನು ಹುಟ್ಟು ಹಾಕಲಾಗಿದೆ ಎಂದವರು ದೂರಿದ್ದರು. ಅಂದಹಾಗೆ, ಕಪ್ಪು ಮನುಷ್ಯರು ಈ ಭೂಮಿಯಲ್ಲಿ ಬಿಳಿಯರ ವಿವಿಧ ಬಗೆಯ ಪ್ರಯೋಗಗಳಿಗೆ ಬಲಿಯಾಗುತ್ತಲೇ ಬಂದಿದ್ದಾರೆ. ಏಡ್ಸ್ ಮತ್ತು ಎಬೋಲ ಆ ಪ್ರಯೋಗಗಳ ಆಧುನಿಕ ಮಾದರಿ ಎಂದು ಅಂದುಕೊಳ್ಳುವುದಕ್ಕೆ ಪೂರಕವಾದ ಧಾರಾಳ ಪುರಾವೆಗಳು ಚರಿತ್ರೆಯ ಉದ್ದಕ್ಕೂ ಇವೆ. ಇಂಥ ಸ್ಥಿತಿಯಲ್ಲಿ, ಆಫ್ರಿಕನ್ ಖಂಡದ ಮೇಲೆ ಎರಗಿರುವ ಏಡ್ಸ್ ಮತ್ತು ಎಬೋಲದ ಹಿಂದೆ ಗುಮಾನಿ ಪಡುವುದನ್ನು ಅಪರಾಧವಾಗಿ ಕಾಣಬೇಕಿಲ್ಲ.
ಏನೇ ಆಗಲಿ, ಪ್ರಾಕೃತಿಕ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆದ ಮನುಷ್ಯನಿಗೆ ಪ್ರಕೃತಿಯು ಎಬೋಲವನ್ನು ಉಡುಗೊರೆಯಾಗಿ ನೀಡಿದೆ ಎಂಬ ವ್ಯಾಖ್ಯಾನವನ್ನು ಒಪ್ಪಿಕೊಂಡರೂ, ಬಲಾಢ್ಯ ರಾಷ್ಟ್ರಗಳು ಅಪರಾಧ ಮುಕ್ತವಾಗುವುದಿಲ್ಲ. ಆ ಸಂಪತ್ತನ್ನು ಲೂಟಿ ಮಾಡುವಲ್ಲಿ ನೇತೃತ್ವ ವಹಿಸಿದ್ದೇ ಅಲ್ಲಿನ ಕಂಪೆನಿಗಳು. ಇಷ್ಟಿದ್ದೂ, ಎಬೋಲದ ಬಗ್ಗೆ ಅವು ತೀರಾ ನಿರ್ಲಕ್ಷ್ಯವನ್ನಷ್ಟೇ ತಾಳಿದುವು. ಐಸಿಸ್ ಮುಕ್ತ ಜಗತ್ತಿನ ಬಗ್ಗೆ ಅಮೇರಿಕ ಘೋಷಣೆ ಹೊರಡಿಸಿರುವಂತೆಯೇ ಎಬೋಲ ಮುಕ್ತ ಆಫ್ರಿಕನ್ ಖಂಡದ ಬಗ್ಗೆ ಅಮೇರಿಕದಿಂದ ಯಾವ ನೀಲನಕ್ಷೆಯೂ ಪ್ರಕಟವಾಗಿಲ್ಲ. ಡಂಕನ್‍ರಿಗೆ ಶ್ರದ್ಧಾಂಜಲಿ ಸಲ್ಲಿಸುವಲ್ಲಿಂದ ನೈನಾ ಪಾಮ್‍ರನ್ನು ಆಲಂಗಿಸುವಲ್ಲಿಗೆ ಒಬಾಮರ ಎಬೋಲ ವಿರೋಧಿ ಹೋರಾಟವು ಕೊನೆಗೊಂಡಿತು.ಆದ್ದರಿಂದಲೇ,