ಶಿಶುವೊಂದು ಬೆಳೆಯುತ್ತಾ ಹೋದಂತೆ ಪ್ಯಾಂಪರ್ಸ್‍ನಿಂದ ಅಂಡರ್‍ವೇರ್‍ಗೆ, ಅಂಡರ್‍ವೇರ್‍ನಿಂದ ಚಡ್ಡಿಗೆ, ಚಡ್ಡಿಯಿಂದ ಪ್ಯಾಂಟ್, ಚೂಡಿದಾರ್, ಲಂಗಧಾವಣಿ, ಸೀರೆ ಅಥವಾ ಲುಂಗಿ ಇತ್ಯಾದಿ ಇತ್ಯಾದಿಗಳಿಗೆ ತನ್ನ ಉಡುಪನ್ನು ಬದಲಾಯಿಸುತ್ತಾ ಹೋಗುವುದು ಸಹಜ. ಆದ್ದರಿಂದಲೇ ಈ ಪ್ರಕ್ರಿಯೆಗೆ ಸಮಾಜ ಆಶ್ಚರ್ಯ ಪಟ್ಟದ್ದೂ ಇಲ್ಲ, ಆತಂಕದಿಂದ ನೋಡಿದ್ದೂ ಇಲ್ಲ. ಆದರೆ, ಚಡ್ಡಿಯನ್ನೋ ಪ್ಯಾಂಟನ್ನೋ ಧರಿಸಿ ಓಡಾಡಬೇಕಾದ ಪ್ರಾಯದ ಹುಡುಗನೋರ್ವ ಪ್ಯಾಂಪರ್ಸ್‍ಗೇ ಜೋತುಬಿದ್ದರೆ ಮತ್ತು ಹಠ ಹಿಡಿದು ಅದನ್ನೇ ಧರಿಸಿ ಓಡಾಡತೊಡಗಿದರೆ ಅದು ಅಸಹಜವಾಗಿ ಕಾಣುತ್ತದೆ. ಮಧ್ಯ ವಯಸ್ಕನೋರ್ವ ಚಡ್ಡಿಯನ್ನೇ ಶಾಶ್ವತ ಉಡುಪಾಗಿ ಆಯ್ಕೆ ಮಾಡಿಕೊಂಡಾಗಲೂ ಇಂಥದ್ದೊಂದು ಕುತೂಹಲ ಹುಟ್ಟುವುದಿದೆ. ಹಾಗಂತ, ಮಧ್ಯವಯಸ್ಕನ ಈ ಉಡುಪು ತಮಾಷೆ, ವ್ಯಂಗ್ಯ, ಅಪಹಾಸ್ಯಕ್ಕೆ ಒಳಗಾಗಬೇಕಾದ ಅಗತ್ಯ ಖಂಡಿತ ಅಲ್ಲ. ಆಯ್ಕೆಯ ಸ್ವಾತಂತ್ರ್ಯ ಇರುವಲ್ಲಿ ಅದನ್ನು ಗೌರವಿಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ. ಈ ಎಚ್ಚರಿಕೆ ಜಾಗೃತವಾಗಿರುವುದರಿಂದಲೇ ಆರೆಸ್ಸೆಸ್ ಕಳೆದ 90 ವರ್ಷಗಳಿಂದ ಸಮವಸ್ತ್ರವಾಗಿ ಪಾಲಿಸುತ್ತಾ ಬಂದಿರುವ ಖಾಕಿ ಚಡ್ಡಿಯನ್ನು ಬಹುಸಂಖ್ಯಾತ ಸಮಾಜ ತಮಾಷೆಗೆ ಬಳಸಿಕೊಂಡಿಲ್ಲ. ಕೆಲವರು ಆರೆಸ್ಸೆಸ್ಸನ್ನು ಗುರುತಿಸುವುದಕ್ಕೆ ಚಡ್ಡಿಯನ್ನು ಸಂಕೇತ ನಾಮವಾಗಿ ಬಳಕೆ ಮಾಡಿದ್ದರೂ ಚಡ್ಡಿಯ ಕಾರಣಕ್ಕಾಗಿಯೇ ಆರೆಸ್ಸೆಸ್ ಟೀಕೆಗೆ ಒಳಗಾಗಿದ್ದು ತೀರಾ ತೀರಾ ಕಡಿಮೆ. ಸಮವಸ್ತ್ರವು ಧರ್ಮ ಇಲ್ಲವೇ ಸಂಘಟನೆಗೆ ಸಂಬಂಧಿಸಿ ತೀರಾ ಖಾಸಗಿಯಾದದ್ದು. ಒಂದು ಸಂಘಟನೆ ಸಮವಸ್ತ್ರವಾಗಿ ಯಾವ ಉಡುಪನ್ನು, ಯಾವ ಬಣ್ಣವನ್ನು ಮತ್ತು ಯಾವ ಶೈಲಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹೊರಗಿನಿಂದ ನಿರ್ದೇಶಿಸುವುದು ಅವುಗಳ ಆಂತರಿಕ ವಿಷಯದಲ್ಲಿ ಮಧ್ಯ ಪ್ರವೇಶಿಸಿದಂತೆ. ಉಡುಪಿನ ಉದ್ದಳತೆಯ ಬಗ್ಗೆ ಭಿನ್ನಾಭಿಪ್ರಾಯಗಳೇನೇ ಇದ್ದರೂ ಅವನ್ನು ವ್ಯಕ್ತಪಡಿಸುವುದಕ್ಕೆ ಒಂದು ಚೌಕಟ್ಟನ್ನು ಸಮಾಜ ಸದಾ ಪಾಲಿಸುತ್ತಲೇ ಬಂದಿದೆ. ಈ ಆಧಾರದಲ್ಲಿ ಹೇಳುವುದಾದರೆ, ಖಾಕಿ ಚಡ್ಡಿಯಿಂದ ಕಂದು ಬಣ್ಣದ ಪ್ಯಾಂಟ್‍ಗೆ ಆರೆಸ್ಸೆಸ್ ತನ್ನ ಸಮವಸ್ತ್ರವನ್ನು ಬದಲಿಸುವುದು ಪಕ್ಕಾ ಆಂತರಿಕ ವಿಷಯ. ಸಾರ್ವಜನಿಕವಾಗಿ ಚರ್ಚಿಸಬೇಕಾದಷ್ಟು ಮಹತ್ವಪೂರ್ಣವಲ್ಲದ್ದು ಎಂದೂ ಹೇಳಬಹುದು. ಆದರೆ ಆರೆಸ್ಸೆಸ್‍ನ ಮಟ್ಟಿಗೆ ಇಷ್ಟನ್ನೇ ಹೇಳಿ ಪೂರ್ಣ ವಿರಾಮ ಹಾಕಬಹುದೇ? ಕಳೆದ 90 ವರ್ಷಗಳಿಂದ ಅದು ಈ ದೇಶದಲ್ಲಿ ಹೇಗೆಲ್ಲ ಗುರುತಿಗೀಡಾಗಿದೆ? ದೇಶದ ಸಾಂಸ್ಕೃತಿಕ, ರಾಜಕೀಯ, ಧಾರ್ಮಿಕ ಮತ್ತಿತರ ವಿಷಯಗಳಲ್ಲಿ ಅದು ಯಾವೆಲ್ಲ ಪಾತ್ರವನ್ನು ನಿಭಾಯಿಸಿದೆ? ಸಾವರ್ಕರ್, ಗೋಲ್ವಾಲ್ಕರ್, ಹೆಗ್ಡೇವಾರ್‍ಗಳಿಂದ ಹಿಡಿದು ಈಗಿನ ಭಾಗವತ್‍ವರೆಗೆ ಅವರು ವ್ಯಕ್ತಪಡಿಸುತ್ತಾ ಬಂದ ಅಭಿಪ್ರಾಯ, ಸಿದ್ಧಾಂತ, ವಿಚಾರಗಳು ಏನು? ಇತರೆಲ್ಲ ಸಂಘಟನೆಗಳಂತೆ ಆರೆಸ್ಸೆಸ್ಸನ್ನೂ ಸಾಮಾನ್ಯ ಸಂಘಟನೆಯಾಗಿ ಕಾಣಬಹುದೇ?
ಮುಹಮ್ಮದ್ ಅಲಿ ಜಿನ್ನಾಗಿಂತ ಮೊದಲೇ ದ್ವಿ ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದು ಆರೆಸ್ಸೆಸ್. ಈ ಕುರಿತಂತೆ ದೇಶದಲ್ಲಿ ಧಾರಾಳ ಚರ್ಚೆಗಳು ಈಗಾಗಲೇ ನಡೆದಿವೆ. ಬ್ರಿಟಿಷರೊಂದಿಗೆ ಕೈ ಜೋಡಿಸಿದ ಆರೋಪ ಸಾವರ್ಕರ್ ಮೇಲಿದೆ. ಹಿಟ್ಲರ್ ಮತ್ತು ಮುಸ್ಸೋಲಿನಿಯಿಂದ ಆರೆಸ್ಸೆಸ್ ಪ್ರಭಾವಿತವಾಗಿರುವುದನ್ನು ಮತ್ತು ಅವರದೇ ಜನಾಂಗೀಯ ಸಿದ್ಧಾಂತವನ್ನು ಅದು ಭಾರತಕ್ಕೆ ಹೊಂದಿಸಿಕೊಂಡು ಪ್ರತಿಪಾದಿಸುತ್ತಿರುವುದನ್ನು ಸಾಬೀತುಪಡಿಸುವುದಕ್ಕೆ ಪುರಾವೆಗಳ ಅಗತ್ಯವೇ ಇಲ್ಲದಷ್ಟು ಇವತ್ತು ಸ್ಪಷ್ಟವಾಗಿದೆ. ಇದರ ನಾಯಕರು ಇಟಲಿಗೆ ತೆರಲಿ ಮುಸೋಲಿನಿಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಆತನ ಮನುಷ್ಯ ವಿರೋಧಿ ವಿಚಾರಧಾರೆಯನ್ನು ಕಡ ತಂದು ತಮ್ಮ ಸಿದ್ಧಾಂತದಲ್ಲಿ ಅಳವಡಿಸಿಕೊಂಡಿದ್ದಾರೆ. ಗಾಂಧೀಜಿಯವರನ್ನು ಕೊಂದ ಆರೋಪವನ್ನು ಹೊತ್ತುಕೊಂಡಿರುವುದೂ ಇದೇ ಆರೆಸ್ಸೆಸ್. ಆ ಕಾರಣಕ್ಕಾಗಿಯೇ ಅದು ನಿಷೇಧಕ್ಕೂ ಒಳಪಟ್ಟಿತು. ಆರೆಸ್ಸೆಸ್‍ನ ಸ್ವಾತಂತ್ರ್ಯಪೂರ್ವ ಇತಿಹಾಸವೇ ಇಷ್ಟು ಉಜ್ವಲವಾಗಿರುವಾಗ ಇನ್ನು ಸ್ವಾತಂತ್ರ್ಯಾನಂತರದ ಇತಿಹಾಸವನ್ನು ವಿವರವಾಗಿ ಮಂಡಿಸಬೇಕಿಲ್ಲವಲ್ಲ. ಲಕ್ಷಕ್ಕಿಂತಲೂ ಅಧಿಕ ಶಾಖೆಗಳಿರುವ ಮತ್ತು 60ಕ್ಕಿಂತಲೂ ಅಧಿಕ ಉಪ ಸಂಘಟನೆಗಳನ್ನು ಹೊಂದಿರುವ ಆರೆಸ್ಸೆಸ್, ಹಿಂದೂ ರಾಷ್ಟ್ರ ಕಲ್ಪನೆಯೊಂದಿಗೆ ಹುಟ್ಟಿಕೊಂಡಿದೆ. ಈ ರಾಷ್ಟ್ರ ಕಲ್ಪನೆ ಎಷ್ಟು ಅಪಾಯಕಾರಿಯೆಂದರೆ, ಈ ಹಿಂದೂ ರಾಷ್ಟ್ರದಲ್ಲಿ ಸರ್ವರೂ ಸಮಾನರಲ್ಲ. ಮುಸ್ಲಿಮರು, ಕ್ರೈಸ್ತರೆಲ್ಲ ಇಲ್ಲಿ ದ್ವಿತೀಯ ದರ್ಜೆಯ ನಾಗರಿಕರು. ಆರ್ಯ ಜನಾಂಗೀಯ ಮೇಲ್ಮೆಯನ್ನು ಬಹಿರಂಗವಾಗಿ ಇವತ್ತು ಅದು ಪ್ರತಿಪಾದಿಸದಿದ್ದರೂ ಆಂತರಿಕವಾಗಿ ಅದರ ನಡೆ-ನುಡಿಗಳು ಅದನ್ನೇ ಬಿಂಬಿಸುತ್ತವೆ ಎಂದು ಹೇಳಲಾಗುತ್ತದೆ. ಈ ದೇಶದ ದಲಿತ, ಕೊರಗ, ದುರ್ಬಲ, ಆದಿವಾಸಿ ಜನಾಂಗಗಳ ಆರಾಧನಾ ಪದ್ಧತಿಯನ್ನು ಮತ್ತು ಆರಾಧ್ಯರನ್ನು ಅನಾಮತ್ತಾಗಿ ಆಪೋಶನ ಪಡಕೊಂಡ ಮತ್ತು ಪಡಕೊಳ್ಳುತ್ತಿರುವ ಆರೋಪವೂ ಆರೆಸ್ಸೆಸ್‍ನ ಮೇಲಿದೆ. ವರ್ಣಾಶ್ರಮವನ್ನು ವೃತ್ತಿಸೂಚಕವೆಂದು ವ್ಯಾಖ್ಯಾನಿಸುತ್ತಾ ಯಾರಿಗೆ ಬೇಕಾದರೂ ಬ್ರಾಹ್ಮಣನಾಗಬಹುದು ಎಂದು ಅದು ಸಮರ್ಥಿಸಿಕೊಳ್ಳುತ್ತದೆ. ಆದರೆ ಅದರ ಲಕ್ಷಾಂತರ ಶಾಖೆಗಳಲ್ಲಿ ಒಬ್ಬನೇ ಒಬ್ಬ ದಲಿತನನ್ನಾದರೂ ಬ್ರಾಹ್ಮಣನಾಗಿ ಪರಿವರ್ತಿಸಲಾಗಿದೆಯೇ ಎಂಬ ಪ್ರಗತಿಪರರ ಪ್ರಶ್ನೆಗೆ ಈ ವರೆಗೂ ಅದರಿಂದ ಸಮರ್ಪಕ ಉತ್ತರ ಬಂದೇ ಇಲ್ಲ. ನಾಲ್ಕೈದು ತಿಂಗಳ ಹಿಂದಷ್ಟೇ ಅದು ಮೀಸಲಾತಿಯ ವಿರುದ್ಧ ಮಾತಾಡಿತ್ತು. ದಲಿತ ಸಮುದಾಯದ ಆಹಾರ ಪದ್ಧತಿಯನ್ನು ದೈವವಿರೋಧಿಯಾಗಿ ಬಣ್ಣಿಸಿ ನಿಷೇಧ ಹೇರಲು ಒತ್ತಾಯಿಸುತ್ತಿರುವುದೂ ಈ ಸಂಘಟನೆಯೇ. ಈ ದೇಶದಲ್ಲಿ ನಡೆದ ಹೆಚ್ಚಿನೆಲ್ಲ ಹತ್ಯಾಕಾಂಡಗಳ ಕುರಿತಂತೆ ಆರೆಸ್ಸೆಸ್ಸನ್ನು ಆರೋಪಿ ದೃಷ್ಟಿಯಿಂದಲೇ ನೋಡಲಾಗುತ್ತಿದೆ. ಅದರ ಗರಡಿಯಲ್ಲಿ ಪಳಗಿದ ರಾಜಕೀಯ ಅಥವಾ ಸಾಮಾಜಿಕ ನಾಯಕರು ಪ್ರತಿ ಸಂದರ್ಭದಲ್ಲೂ ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಿಯೇ ಮಾತಾಡುತ್ತಾರೆ. ಮುಸ್ಲಿಮರನ್ನು ತುಚ್ಛೀಕರಿಸುತ್ತಾರೆ. ಸಮ್ಜೋತಾ ಎಕ್ಸ್ ಪ್ರೆಸ್, ಮಕ್ಕಾ, ಮಾಲೆಗಾಂವ್ ಮುಂತಾದ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವವರಿಗೂ ಆರೆಸ್ಸೆಸ್‍ಗೂ ನಂಟಿದೆ ಎಂದು ಅನೇಕ ಬಾರಿ ಈ ದೇಶದ ಮಾಧ್ಯಮಗಳಲ್ಲಿ ಚರ್ಚೆಯಾಗಿದೆ. ಒಂದು ರೀತಿಯಲ್ಲಿ, ಆರೆಸ್ಸೆಸ್ ತನ್ನ ಹುಟ್ಟಿನಿಂದ ಈವತ್ತಿನವರೆಗೂ ಇಬ್ಬಗೆಯ ನೀತಿಯನ್ನು ಅಳವಡಿಸುತ್ತಲೇ ಬಂದಿದೆ. ಕನ್ಹಯ್ಯಾ ಕುಮಾರ್‍ನನ್ನು ದೇಶದ್ರೋಹಿ ಎಂದು ಕರೆದಿರುವ ಇದೇ ಸಂಘಟನೆ ಶ್ರೀಶ್ರೀ ರವಿಶಂಕರ್ ಅವರ 'ಪಾಕಿಸ್ತಾನ್ ಜಿಂದಾಬಾದ್'ಗೆ ಯಾವ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿಲ್ಲ. ಅದು ನ್ಯಾಯವನ್ನು ಪ್ರತಿಪಾದಿಸುವ ಪ್ರತಿ ಸಂದರ್ಭದಲ್ಲೂ ತನ್ನವರು ಮತ್ತು ಇತರರು ಎಂಬ ಮಾನದಂಡವನ್ನು ಸದಾ ಪಾಲಿಸುತ್ತಲೇ ಬಂದಿವೆ.
ಅದು ಪ್ರತಿಪಾದಿಸುವ ದೇಶಪ್ರೇಮ, ಸಂಸ್ಕೃತಿ, ಧರ್ಮ, ನಾಗರಿಕತೆ, ಸ್ವಾತಂತ್ರ್ಯ ಮುಂತಾದ ಎಲ್ಲದಕ್ಕೂ ನಾವು ಕಲ್ಪಿಸಿಕೊಂಡಿರುವ ಮತ್ತು ಸಂವಿಧಾನ ಕೊಡಮಾಡಿರುವ ಅರ್ಥಕ್ಕಿಂತ ಭಿನ್ನವಾದದ್ದೊಂದು ಆಯಾಮವಿದೆ. ಬಾಹ್ಯನೋಟಕ್ಕೆ ಅದು ಭಾರತೀಯ ಸಂಸ್ಕೃತಿ ಎಂದು ಹೇಳುತ್ತಿದ್ದರೂ ಆಂತರಿಕವಾಗಿ ಆ ಸಂಸ್ಕೃತಿ ಪೂರ್ಣವಾಗಿ ಆರ್ಯನ್ ಸಂಸ್ಕೃತಿಯ ಕುರಿತಾಗಿರುವುದಾಗಿ ಅದರ ಒಳಹೊಕ್ಕು ಹೊರಬಂದ ನಾಯಕರು ಬಹಿರಂಗಪಡಿಸುತ್ತಿರುತ್ತಾರೆ. ಆರೆಸ್ಸೆಸ್‍ನ ಈ ಒಳಗೊಂದು ಹೊರಗೊಂದು ನೀತಿಯೇ ಅದರ ಮೇಲೆ ಸಾರ್ವಜನಿಕ ಗುಮಾನಿಯನ್ನು ಹೆಚ್ಚಿಸಿದೆಯೆಂದು ಖಂಡಿತ ಹೇಳಬಹುದು. ಆರೆಸ್ಸೆಸ್ ತೀರಾ ಸಾಧುವಲ್ಲ. ಅದು ಸರ್ವ ಸಮಾನತೆಯ ಪ್ರತಿಪಾದಕವೂ ಅಲ್ಲ. ಅದು ಸಾಂಸ್ಕೃತಿಕ ಸಂಘಟನೆಯೂ ಅಲ್ಲ. ಕಳೆದ 90 ವರ್ಷಗಳಲ್ಲಿ ಅದರ ಮೇಲೆ ಕೇಳಿ ಬಂದಿರುವ ದೂರು ಹಾಗೂ ಅದರ ಕಾರ್ಯಕರ್ತರು ಮತ್ತು ನಾಯಕರ ನಡವಳಿಕೆಗಳು ಅದು ಖಾಕಿ ಚಡ್ಡಿಯಿಂದ ಕಂದು ಬಣ್ಣಕ್ಕೆ ಸಮವಸ್ತ್ರ ಬದಲಿಸಿದಷ್ಟು ಅಹಿಂಸಾತ್ಮಕವಾದುದಲ್ಲ. ಪ್ರತಿ ಹೆಜ್ಜೆಯಲ್ಲೂ ಅದರ ಉದ್ದೇಶ ಶುದ್ಧಿಯನ್ನು ಪ್ರಶ್ನಿಸುವ ಗುರುತುಗಳಿವೆ. ಆದ್ದರಿಂದ ಆರೆಸ್ಸೆಸ್ ಖಾಕಿಯಿಂದ ಕಂದುಬಣ್ಣಕ್ಕೆ ತಿರುಗುವುದರಿಂದ ಈ ಎಲ್ಲ ಕಳಂಕಗಳು ಕಳೆದು ಹೋಗುವುದಿಲ್ಲ. ತನ್ನ ಧೋರಣೆ ಮತ್ತು ಮನುಷ್ಯ ವಿರೋಧಿ ವಿಚಾರಧಾರೆಯನ್ನು ಕೈಬಿಡದ ಹೊರತು ಉಡುಪಿನ ಬಣ್ಣ ಮತ್ತು ಉದ್ದಳತೆಯಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಯಾವ ಪ್ರಯೋಜನವೂ ಇಲ್ಲ. ಸಂಘಟನೆಯ ಧೋರಣೆ ಬದಲಾಗದಿದ್ದರೆ ಚಡ್ಡಿಯೋ ಪ್ಯಾಂಟೋ ಖಾಕಿಯೋ ಕಂದೋ ಯಾವ ಬಣ್ಣವಾದರೇನು? ಅದರಿಂದ ಈ ದೇಶಕ್ಕೆ ಆಗುವ ಲಾಭವೇನು? ಮೊದಲು ಅದರ ಧೋರಣೆ ಬದಲಾಗಲಿ. ಬಳಿಕ ‘ಬಣ್ಣ'ವನ್ನು ಬದಲಾಯಿಸಿಕೊಳ್ಳಲಿ.

No comments:
Post a Comment