ವಾಗಿ ವ್ಯಕ್ತವಾಗುವುದೂ ಇದುವೇ.
Thursday, 31 March 2016
ಹ್ಯಾಪಿ ಗುಡ್‍ಫ್ರೈಡೇ?
ವಾಗಿ ವ್ಯಕ್ತವಾಗುವುದೂ ಇದುವೇ.
Wednesday, 23 March 2016
ನಕಾರಾತ್ಮಕತೆಯ ಪ್ರಾಬಲ್ಯ ಮತ್ತು ಒಂದು ಸಂಶೋಧನೆ
ಕಳೆದವಾರ ಎರಡು ಪ್ರಮುಖ ಘಟನೆಗಳು ಜರುಗಿದುವು. ಇವುಗಳಲ್ಲಿ ಒಂದು ಘಟನೆಗೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲು ಸಾಧ್ಯವಾದರೆ, ಇನ್ನೊಂದು ಘಟನೆ ಹತ್ತಾರು ಸುದ್ದಿಗಳ ಮಧ್ಯೆ ಕೇವಲ ಒಂದು ಸುದ್ದಿಯಾಗುವ ಭಾಗ್ಯವನ್ನಷ್ಟೇ ಕಂಡು ಸತ್ತು ಹೋಯಿತು. ಮಾರ್ಚ್ 15ರಂದು ರಾಜಸ್ಥಾನದ ಮೇವಾರ್ ವಿಶ್ವವಿದ್ಯಾನಿಲಯದಲ್ಲಿ 4 ಮಂದಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಬಲಪಂಥೀಯ ದುಷ್ಕರ್ಮಿಗಳಿಂದ ಹಲ್ಲೆ ನಡೆಯಿತು. ಇವರು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸವನ್ನು ಬೇಯಿಸುತ್ತಿದ್ದರು ಎಂಬುದು ಈ ಹಲ್ಲೆಗೆ ಕಾರಣವನ್ನಾಗಿ ಕೊಡಲಾಯಿತು. ಪೊಲೀಸರು ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನೇ ಬಂಧಿಸಿದರು. ಮರುದಿನ ಅವರಿಗೆ ಜಾಮೀನು ನೀಡುವಾಗ, 'ಆರು ತಿಂಗಳುಗಳ ಕಾಲ ನಿಮ್ಮ ಮೇಲೆ ನಿಗಾ ಇಡಲಾಗುವುದು' ಎಂದು ಕೋರ್ಟು ಎಚ್ಚರಿಸಿತು. ಇದರ ಜೊತೆಜೊತೆಗೇ ಅಲ್ಲಿನ ಪ್ರಾಣಿ ಸಾಕಾಣಿಕಾ ಇಲಾಖೆಯಿಂದ ಹೊರಬಿದ್ದ ಸಂಶೋಧನಾ ವರದಿಯು ಆ ಇಡೀ ಘಟನೆಯು ಪೂರ್ವಗ್ರಹ ಪೀಡಿತವಾದುದು ಎಂಬುದಾಗಿ ಸಾರಿತು. ‘ಅವರು ಬೇಯಿಸುತ್ತಿದ್ದುದು ಗೋಮಾಂಸವಲ್ಲ, ಆಡಿನ ಮಾಂಸ’ ಎಂಬುದಾಗಿ ಅದು ಮಾಂಸ ಪರೀಕ್ಷೆಯ ಬಳಿಕ ಘೋಷಿಸಿತು. ಈ ಎಲ್ಲವೂ ರಾಷ್ಟ್ರಮಟ್ಟದಲ್ಲಿ ಸುದ್ದಿಗೀಡಾಯಿತು. ಟಿ.ವಿ. ಚಾನೆಲ್‍ಗಳು ಈ ಸುದ್ದಿಯನ್ನಾಧರಿಸಿ ಚರ್ಚೆಗಳನ್ನು ಏರ್ಪಡಿಸಿದುವು. ಪತ್ರಿಕೆಗಳಲ್ಲೂ ಸಾಕಷ್ಟು ಕವರೇಜ್ ಲಭ್ಯವಾದುವು. ಇದಾಗಿ ಮೂರು ದಿನಗಳ ಬಳಿಕ ಮಾರ್ಚ್ 20ರಂದು ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯ ವಿಶ್ವವಿದ್ಯಾನಿಲಯದ ಮೂವರು ವಿದ್ಯಾರ್ಥಿಗಳು ತಮ್ಮ ವಿಶೇಷ ಪ್ರತಿಭೆಯನ್ನು ಪ್ರದರ್ಶಿಸಿದರು. ರಾಷ್ಟ್ರಪತಿ ಭವನ ಇದಕ್ಕೆ ಸಾಕ್ಷಿಯಾಯಿತು. ವಿಶ್ವವಿದ್ಯಾನಿಲಯಗಳಲ್ಲಿ ಆಗಿರಬಹುದಾದ ಹೊಸ ಸಂಶೋಧನೆಗಳನ್ನು ಪ್ರದರ್ಶಿಸಲು ರಾಷ್ಟ್ರಪತಿ ಭವನವು ಆಹ್ವಾನಿಸಿತ್ತು. ಅದರಂತೆ 114 ಸಂಶೋಧನೆಗಳ ಪಟ್ಟಿಯಲ್ಲಿ 6ನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಐಐಟಿ ಕಾನ್ಪುರ, ಜಮ್ಮು ಕೇಂದ್ರೀಯ ವಿಶ್ವ ವಿದ್ಯಾನಿಲಯ, ಐಐಟಿ ಮದ್ರಾಸ್, ಎನ್ಐಟಿ ತಿರುಚಿನಾಪಳ್ಳಿ, ಐಐಟಿ ದೆಹಲಿ ಮತ್ತು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯ ವಿಶ್ವವಿದ್ಯಾನಿಲಯಗಳು ಈ ಪ್ರದರ್ಶನಕ್ಕೆ ಆಯ್ಕೆಯಾದುವು. ಜಾಮಿಯಾದ ಹುಮಾ ಪರ್ವೇಝï, ಫೈಝ ಜಮಾಲ್ ಮತ್ತು ಫರಾಜ್ ಖಾನ್ ಎಂಬೀ ವಿದ್ಯಾರ್ಥಿಗಳು 'ಇನ್ನೋಕಾರ್ಟ್' ಎಂಬ ಪರಿಸರ ಸ್ನೇಹಿ ತಳ್ಳುಗಾಡಿಯನ್ನು ಪ್ರದರ್ಶಿಸಿ ವಿಶೇಷ ಗೌರವಕ್ಕೆ ಪಾತ್ರರಾದರು. ಇದು ಆಹಾರ ಮಾರಾಟ ಮಾಡುವ ತಳ್ಳುಗಾಡಿ. ಇದರಲ್ಲಿ ಸೂಕ್ತ ದಾಸ್ತಾನು ವ್ಯವಸ್ಥೆಯಿದೆ. ಮೇಲೆ ಮುಚ್ಚಿಗೆಯ ವ್ಯವಸ್ಥೆ ಇದೆ. ಒಣ ಮತ್ತು ಹಸಿ ತ್ಯಾಜ್ಯವನ್ನು ಸಂಗ್ರಹಿಸಿಡಲು ಎರಡು ಪ್ರತ್ಯೇಕ ವಿಭಾಗಗಳ ಜೊತೆಗೇ ಮುಚ್ಚಿಗೆಯ ಮೇಲೆ ಸೌರ ವಿದ್ಯುತ್ ಉತ್ಪಾದಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ‘ಇನ್ನೋಕಾರ್ಟ್’ ಭಾರತದ ಬೀದಿ ಆಹಾರ ಮಾರಾಟ ಪದ್ಧತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಬಲ್ಲುದು ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಲಾಗಿದೆ. ವಿವಿಯ ಆವರಣದ ರಸ್ತೆಗಳಲ್ಲಿರುವ ಕ್ಯಾಂಟೀನಿನ ಆಹಾರ ಪದಾರ್ಥಗಳ ಮಾರಾಟದಲ್ಲಿ ತೊಡಗಿಸಿ ಈ ತಳ್ಳುಗಾಡಿಯನ್ನು ಪರೀಕ್ಷಿಸುತ್ತೇವೆ ಮತ್ತು ಪೇಟೆಂಟ್‍ಗಾಗಿ ಅರ್ಜಿ ಹಾಕುತ್ತೇವೆ ಎಂದು ಈ ಉತ್ಸಾಹಿ ಮಕ್ಕಳು ಹೇಳಿಕೊಂಡಿದ್ದಾರೆ. ಆದರೆ ಈ ಸಂಶೋಧನೆಯ ಬಗ್ಗೆ ಮಾಧ್ಯಮಗಳು ಬಹುತೇಕ ಶೂನ್ಯ ಕುತೂಹಲವನ್ನು ವ್ಯಕ್ತಪಡಿಸಿದುವು. ತೀರಾ ಸಣ್ಣ ಸುದ್ದಿಯ ಗೌರವವನ್ನಷ್ಟೇ ಅವು ಇದಕ್ಕೆ ಕೊಟ್ಟವು. ಕೆಲವು ಪತ್ರಿಕೆಗಳಂತೂ ಇದಕ್ಕೆ ಸುದ್ದಿಯಾಗುವ ಭಾಗ್ಯವನ್ನೂ ಕರುಣಿಸಲಿಲ್ಲ. ಅಷ್ಟಕ್ಕೂ, ಮಾಧ್ಯಮಗಳ ಮಟ್ಟಿಗೆ ಈ ಸಂಶೋಧನೆಯಲ್ಲಿ ಸೆನ್ಸೇಷನಲ್ ಅನ್ನುವುದು ಏನೂ ಇಲ್ಲ. ಒಂದು ತಳ್ಳುಗಾಡಿ, ಮೂವರು ಮುಸ್ಲಿಮ್ ವಿದ್ಯಾರ್ಥಿಗಳು ಮತ್ತು ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾನಿಲಯ.. ಇಷ್ಟನ್ನು ಬಿಟ್ಟರೆ ಉಳಿದಂತೆ ಈ ಸುದ್ದಿ ಗೊಂಚಲಿನಲ್ಲಿ ಭಾರತ್ ಮಾತಾಕಿ ಜೈ, ಪಾಕಿಸ್ತಾನ್ ಜಿಂದಾಬಾದ್, ಖಾಕಿ ಚಡ್ಡಿ-ಕಂದು ಪ್ಯಾಂಟು, ದೇಶದ್ರೋಹ-ದೇಶಪ್ರೇಮ, ಗೋಮಾಂಸ.. ಮುಂತಾದುವುಗಳಲ್ಲಿರುವ ಆಕರ್ಷಣೆಯೇನೂ ಈ ಸಂಶೋಧನೆಯಲ್ಲಿಲ್ಲವಲ್ಲ.
ನಿಜವಾಗಿ, ವಿವಾದಾತ್ಮಕವಲ್ಲದ ಮತ್ತು ಸಕಾರಾತ್ಮಕವಾದ ಸುದ್ದಿಗಳಿಗೆ ಪ್ರಾಮುಖ್ಯತೆಯನ್ನು ಕೊಡುವುದು ಮತ್ತು ಅವುಗಳ ಮೇಲೆ ಚರ್ಚೆ-ಸಂವಾದಗಳನ್ನು ಏರ್ಪಾಡು ಮಾಡುವುದು ದಡ್ಡತನ ಎಂದು ಕರೆಸಿಕೊಳ್ಳುವಷ್ಟು ಇವತ್ತು ಅಪ್ರಸ್ತುತ ಅನಿಸಿಕೊಳ್ಳುತ್ತಿದೆ. ರಾಷ್ಟ್ರಮಟ್ಟದಲ್ಲಿ ಇವತ್ತು ಸುದ್ದಿಯೊಂದು ಗಮನ ಸೆಳೆಯಬೇಕಾದರೆ ಅದು ಮುಸ್ಲಿಮರಿಗೆ ಸಂಬಂಧಿಸಿರಬೇಕು ಮತ್ತು ಸಂಘಪರಿವಾರ ಅದರಲ್ಲಿ ಭಾಗಿಯಾಗಿರಬೇಕು ಎಂಬ ಅಲಿಖಿತ ನಿಯಮ ಗೊತ್ತಿದ್ದೋ ಗೊತ್ತಿಲ್ಲದೆಯೋ ಜಾರಿಯಲ್ಲಿದೆ. ಗೋಸಾಗಾಟ, ಗೋಮಾಂಸ, ದೇಶದ್ರೋಹ, ಭಯೋತ್ಪಾದನೆ ಮುಂತಾದುವುಗಳೇ ಈ ದೇಶದಲ್ಲಿ ಇವತ್ತು ಸದಾ ಬ್ರೇಕಿಂಗ್ ನ್ಯೂಸ್. ಇಲ್ಲೆಲ್ಲಾ ಮುಸ್ಲಿಮರ ಪಾತ್ರ ಯಾವಾಗಲೂ ನಕಾರಾತ್ಮಕ. ಮುಸ್ಲಿಮರನ್ನು ಅಪರಾಧಿಗಳಂತೆ ಬಿಂಬಿಸಿ ಅವರನ್ನು ಹಲ್ಲೆಗೋ ಹತ್ಯೆಗೋ ಒಳಪಡಿಸುವುದು ಬಲಪಂಥೀಯ ದುಷ್ಕರ್ಮಿಗಳ ತಂತ್ರಗಾರಿಕೆ. ಈ ವಿಷಯವನ್ನೆತ್ತಿಕೊಂಡು ಮಾಧ್ಯಮಗಳು ಆ ಬಳಿಕ ಚರ್ಚೆಯನ್ನೇರ್ಪಡಿಸುತ್ತವೆ. ಜಾತ್ಯತೀತವಾದಿಗಳು ಈ ಚರ್ಚೆಯಲ್ಲಿ ಭಾಗವಹಿಸುತ್ತಾರೆ. ದುಷ್ಕರ್ಮಿಗಳು ಹಸಿ ಹಸಿ ಸುಳ್ಳನ್ನು ಹೇಳಲು ಈ ಚರ್ಚಾ ವೇದಿಕೆಯನ್ನು ದುರುಪಯೋಗಿಸುತ್ತಾರೆ. ಕೊನೆಗೆ ಕೋಣ ಸಾಗಾಟವು ಗೋಸಾಗಾಟವಾಗಿ ಪರಿವರ್ತನೆಯಾಗುತ್ತದೆ. ಆಡಿನ ಮಾಂಸವು ಗೋಮಾಂಸವಾಗುತ್ತದೆ. ಹಸಿರು ಧ್ವಜವು ಪಾಕಿಸ್ತಾನದ ಧ್ವಜವಾಗಿ ಮಾರ್ಪಡುತ್ತದೆ. ಥಳಿತಕ್ಕೊಳಗಾದವರು ಅಪರಾಧಿಗಳಾಗಿಯೂ ಥಳಿಸಿದವರು ನ್ಯಾಯವಂತರಾಗಿಯೂ ಬಿಂಬಿತರಾಗುತ್ತಾರೆ. ಒಂದು ಬಗೆಯ ಕೋಮುಧ್ರುವೀಕರಣಕ್ಕೆ ಇಂಥ ಚರ್ಚೆಗಳು ಬಹುತೇಕ ಬಾರಿ ವೇದಿಕೆಯಾಗುತ್ತಿವೆಯೇ ಹೊರತು, ಸಕಾರಾತ್ಮಕ ಫಲಿತಾಂಶಗಳನ್ನು ತರುವಲ್ಲಿ ವಿಫಲವಾಗುತ್ತಿವೆಯೇನೋ ಎಂದು ಅನಿಸುತ್ತಿದೆ. ಬಹುಶಃ ಸಕಾರಾತ್ಮಕ ಸುದ್ದಿಗಳ ಮೇಲಿನ ಚರ್ಚೆಯನ್ನು ತಡೆಯುವುದಕ್ಕಾಗಿ ಉದ್ದೇಶಪೂರ್ವಕವಾಗಿಯೇ ಬಲಪಂಥೀಯರು ಇಂಥ ಘಟನೆಗಳನ್ನು ಹುಟ್ಟು ಹಾಕುತ್ತಿದ್ದಾರೋ ಎಂಬ ಅನುಮಾನವೂ ಮೂಡುತ್ತಿದೆ. ಹೀಗೆ ಮುಸ್ಲಿಮರೆಂದರೆ ನಕಾರಾತ್ಮಕತೆ, ನಕಾರಾತ್ಮಕತೆಯೆಂದರೆ ಮುಸ್ಲಿಮರು ಎಂಬೊಂದು ವಾತಾವರಣದ ಸೃಷ್ಟಿಗೆ ಒಂದು ಗುಂಪು ತೀವ್ರ ಪರಿಶ್ರಮ ನಡೆಸುತ್ತಿರುವುದರ ಮಧ್ಯೆ, ಸಕಾರಾತ್ಮಕವಾದುದನ್ನು ಚರ್ಚೆಗೆ ಎತ್ತಿಕೊಳ್ಳಬೇಕಾದ ತುರ್ತೊಂದು ಸಮಾಜದ ಮೇಲಿದೆ. ಒಂದು ಕಡೆ ಮೋದಿ ಸರಕಾರವು ಜಾಮಿಯಾ ಮಿಲ್ಲಿಯ ಮತ್ತು ಅಲೀಘಡ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕಿತ್ತುಕೊಳ್ಳಲು ಯತ್ನಿಸುತ್ತಿದೆ. ಈ ಕುರಿತಂತೆ ಸುಪ್ರೀಮ್ ಕೋರ್ಟಿನಲ್ಲಿಯೇ ತನ್ನ ಇಂಗಿತವನ್ನು ಅದು ವ್ಯಕ್ತಪಡಿಸಿದೆ. ಇನ್ನೊಂದು ಕಡೆ ಜಾಮಿಯಾದ ಮೂವರು ಮುಸ್ಲಿಮ್ ವಿದ್ಯಾರ್ಥಿಗಳು ದೇಶವೇ ಹೆಮ್ಮೆ ಪಡಬಹುದಾದ ಸಂಶೋಧನೆಯೊಂದನ್ನು ನಡೆಸಿದ್ದಾರೆ. ಈ ಸುದ್ದಿ ಯಾಕೆ ಮಹತ್ವಪೂರ್ಣ ಎಂದರೆ, ಮುಸ್ಲಿಮ್ ಎಂಬ ಐಡೆಂಟಿಟಿಯನ್ನೇ ದೇಶದ್ರೋಹವಾಗಿಯೋ ಅಸಹಿಷ್ಣುವಾಗಿಯೋ ಅಥವಾ ಅನುಮಾನಿತವಾಗಿಯೋ ಕಾಣಲಾಗುತ್ತಿರುವ ಈ ಹೊತ್ತಿನಲ್ಲಿ ಈ ಸಾಧನೆಯನ್ನು ಮಾಡಲಾಗಿದೆ ಎಂಬುದರಿಂದಾಗಿ. ಸಹಜ ವಾತಾವರಣದಲ್ಲಿ ಮಾಡುವ ಸಂಶೋಧನೆಗೂ ತೀರಾ ಕಲುಷಿತಗೊಂಡಿರುವ ವಾತಾವರಣದಲ್ಲಿ ಮಾಡುವ ಸಂಶೋಧನೆಗೂ ತುಂಬಾ ವ್ಯತ್ಯಾಸ ಇದೆ. ಆದ್ದರಿಂದಲೇ ಈ ಸಂಶೋಧನೆಯು ಪ್ರಾಮುಖ್ಯತೆಯನ್ನು ಪಡೆಯಬೇಕಿತ್ತು ಎಂದು ಮಾತ್ರವಲ್ಲ, ಮಾಧ್ಯಮಗಳು ಈ ಸುದ್ದಿಯ ಹಿನ್ನೆಲೆಯಲ್ಲಿ ಸಕಾರಾತ್ಮಕ ಚರ್ಚೆಯೊಂದನ್ನು ಹುಟ್ಟುಹಾಕುವುದಕ್ಕೂ ಪ್ರಯತ್ನಿಸಬೇಕಾಗಿತ್ತು ಎಂದು ಅನಿಸುವುದು. ಇಂದಿನ ಮುಸ್ಲಿಮ್ ಪ್ರತಿಕೂಲ ಪರಿಸ್ಥಿತಿಯಲ್ಲಿ ‘ಇನ್ನೋಕಾರ್ಟ್' ಸುದ್ದಿಯು ಚರ್ಚೆಗೆ ಒಳಗಾಗುತ್ತಿದ್ದರೆ ಅದು ಸಕಾರಾತ್ಮಕ ವಾತಾವರಣಕ್ಕೆ ಕಾರಣವಾಗುವುದಕ್ಕೂ ಅವಕಾಶ ಇತ್ತು. ಅಲ್ಲದೇ ಬಲಪಂಥೀಯರ ಉದ್ದೇಶವನ್ನು ವಿಫಲಗೊಳಿಸುವುದಕ್ಕೂ ಅದು ನೆರವಾಗುತ್ತಿತ್ತು. ದುರಂತ ಏನೆಂದರೆ, ಇವತ್ತು ವಿಷಯವೊಂದು ಚರ್ಚಾಸ್ಪದವಾಗಬೇಕಾದರೆ ಅದರಲ್ಲಿ ನಕಾರಾತ್ಮಕತೆ ಇರಲೇಬೇಕು ಎಂಬ ನಿಯಮವಿದೆ. ಆದ್ದರಿಂದ, ಇದನ್ನು ಮೀರುವ ಸಾಹಸ ಮಾಡಲೇಬೇಕಾಗಿದೆ. ಇಲ್ಲದಿದ್ದರೆ ಮುಂದೊಂದು ದಿನ ಸಮಾಜ ನಕಾರಾತ್ಮಕ ರೋಗಕ್ಕೆ ತುತ್ತಾಗುವ ಸಾಧ್ಯತೆ ಇಲ್ಲದಿಲ್ಲ.
ನಿಜವಾಗಿ, ವಿವಾದಾತ್ಮಕವಲ್ಲದ ಮತ್ತು ಸಕಾರಾತ್ಮಕವಾದ ಸುದ್ದಿಗಳಿಗೆ ಪ್ರಾಮುಖ್ಯತೆಯನ್ನು ಕೊಡುವುದು ಮತ್ತು ಅವುಗಳ ಮೇಲೆ ಚರ್ಚೆ-ಸಂವಾದಗಳನ್ನು ಏರ್ಪಾಡು ಮಾಡುವುದು ದಡ್ಡತನ ಎಂದು ಕರೆಸಿಕೊಳ್ಳುವಷ್ಟು ಇವತ್ತು ಅಪ್ರಸ್ತುತ ಅನಿಸಿಕೊಳ್ಳುತ್ತಿದೆ. ರಾಷ್ಟ್ರಮಟ್ಟದಲ್ಲಿ ಇವತ್ತು ಸುದ್ದಿಯೊಂದು ಗಮನ ಸೆಳೆಯಬೇಕಾದರೆ ಅದು ಮುಸ್ಲಿಮರಿಗೆ ಸಂಬಂಧಿಸಿರಬೇಕು ಮತ್ತು ಸಂಘಪರಿವಾರ ಅದರಲ್ಲಿ ಭಾಗಿಯಾಗಿರಬೇಕು ಎಂಬ ಅಲಿಖಿತ ನಿಯಮ ಗೊತ್ತಿದ್ದೋ ಗೊತ್ತಿಲ್ಲದೆಯೋ ಜಾರಿಯಲ್ಲಿದೆ. ಗೋಸಾಗಾಟ, ಗೋಮಾಂಸ, ದೇಶದ್ರೋಹ, ಭಯೋತ್ಪಾದನೆ ಮುಂತಾದುವುಗಳೇ ಈ ದೇಶದಲ್ಲಿ ಇವತ್ತು ಸದಾ ಬ್ರೇಕಿಂಗ್ ನ್ಯೂಸ್. ಇಲ್ಲೆಲ್ಲಾ ಮುಸ್ಲಿಮರ ಪಾತ್ರ ಯಾವಾಗಲೂ ನಕಾರಾತ್ಮಕ. ಮುಸ್ಲಿಮರನ್ನು ಅಪರಾಧಿಗಳಂತೆ ಬಿಂಬಿಸಿ ಅವರನ್ನು ಹಲ್ಲೆಗೋ ಹತ್ಯೆಗೋ ಒಳಪಡಿಸುವುದು ಬಲಪಂಥೀಯ ದುಷ್ಕರ್ಮಿಗಳ ತಂತ್ರಗಾರಿಕೆ. ಈ ವಿಷಯವನ್ನೆತ್ತಿಕೊಂಡು ಮಾಧ್ಯಮಗಳು ಆ ಬಳಿಕ ಚರ್ಚೆಯನ್ನೇರ್ಪಡಿಸುತ್ತವೆ. ಜಾತ್ಯತೀತವಾದಿಗಳು ಈ ಚರ್ಚೆಯಲ್ಲಿ ಭಾಗವಹಿಸುತ್ತಾರೆ. ದುಷ್ಕರ್ಮಿಗಳು ಹಸಿ ಹಸಿ ಸುಳ್ಳನ್ನು ಹೇಳಲು ಈ ಚರ್ಚಾ ವೇದಿಕೆಯನ್ನು ದುರುಪಯೋಗಿಸುತ್ತಾರೆ. ಕೊನೆಗೆ ಕೋಣ ಸಾಗಾಟವು ಗೋಸಾಗಾಟವಾಗಿ ಪರಿವರ್ತನೆಯಾಗುತ್ತದೆ. ಆಡಿನ ಮಾಂಸವು ಗೋಮಾಂಸವಾಗುತ್ತದೆ. ಹಸಿರು ಧ್ವಜವು ಪಾಕಿಸ್ತಾನದ ಧ್ವಜವಾಗಿ ಮಾರ್ಪಡುತ್ತದೆ. ಥಳಿತಕ್ಕೊಳಗಾದವರು ಅಪರಾಧಿಗಳಾಗಿಯೂ ಥಳಿಸಿದವರು ನ್ಯಾಯವಂತರಾಗಿಯೂ ಬಿಂಬಿತರಾಗುತ್ತಾರೆ. ಒಂದು ಬಗೆಯ ಕೋಮುಧ್ರುವೀಕರಣಕ್ಕೆ ಇಂಥ ಚರ್ಚೆಗಳು ಬಹುತೇಕ ಬಾರಿ ವೇದಿಕೆಯಾಗುತ್ತಿವೆಯೇ ಹೊರತು, ಸಕಾರಾತ್ಮಕ ಫಲಿತಾಂಶಗಳನ್ನು ತರುವಲ್ಲಿ ವಿಫಲವಾಗುತ್ತಿವೆಯೇನೋ ಎಂದು ಅನಿಸುತ್ತಿದೆ. ಬಹುಶಃ ಸಕಾರಾತ್ಮಕ ಸುದ್ದಿಗಳ ಮೇಲಿನ ಚರ್ಚೆಯನ್ನು ತಡೆಯುವುದಕ್ಕಾಗಿ ಉದ್ದೇಶಪೂರ್ವಕವಾಗಿಯೇ ಬಲಪಂಥೀಯರು ಇಂಥ ಘಟನೆಗಳನ್ನು ಹುಟ್ಟು ಹಾಕುತ್ತಿದ್ದಾರೋ ಎಂಬ ಅನುಮಾನವೂ ಮೂಡುತ್ತಿದೆ. ಹೀಗೆ ಮುಸ್ಲಿಮರೆಂದರೆ ನಕಾರಾತ್ಮಕತೆ, ನಕಾರಾತ್ಮಕತೆಯೆಂದರೆ ಮುಸ್ಲಿಮರು ಎಂಬೊಂದು ವಾತಾವರಣದ ಸೃಷ್ಟಿಗೆ ಒಂದು ಗುಂಪು ತೀವ್ರ ಪರಿಶ್ರಮ ನಡೆಸುತ್ತಿರುವುದರ ಮಧ್ಯೆ, ಸಕಾರಾತ್ಮಕವಾದುದನ್ನು ಚರ್ಚೆಗೆ ಎತ್ತಿಕೊಳ್ಳಬೇಕಾದ ತುರ್ತೊಂದು ಸಮಾಜದ ಮೇಲಿದೆ. ಒಂದು ಕಡೆ ಮೋದಿ ಸರಕಾರವು ಜಾಮಿಯಾ ಮಿಲ್ಲಿಯ ಮತ್ತು ಅಲೀಘಡ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕಿತ್ತುಕೊಳ್ಳಲು ಯತ್ನಿಸುತ್ತಿದೆ. ಈ ಕುರಿತಂತೆ ಸುಪ್ರೀಮ್ ಕೋರ್ಟಿನಲ್ಲಿಯೇ ತನ್ನ ಇಂಗಿತವನ್ನು ಅದು ವ್ಯಕ್ತಪಡಿಸಿದೆ. ಇನ್ನೊಂದು ಕಡೆ ಜಾಮಿಯಾದ ಮೂವರು ಮುಸ್ಲಿಮ್ ವಿದ್ಯಾರ್ಥಿಗಳು ದೇಶವೇ ಹೆಮ್ಮೆ ಪಡಬಹುದಾದ ಸಂಶೋಧನೆಯೊಂದನ್ನು ನಡೆಸಿದ್ದಾರೆ. ಈ ಸುದ್ದಿ ಯಾಕೆ ಮಹತ್ವಪೂರ್ಣ ಎಂದರೆ, ಮುಸ್ಲಿಮ್ ಎಂಬ ಐಡೆಂಟಿಟಿಯನ್ನೇ ದೇಶದ್ರೋಹವಾಗಿಯೋ ಅಸಹಿಷ್ಣುವಾಗಿಯೋ ಅಥವಾ ಅನುಮಾನಿತವಾಗಿಯೋ ಕಾಣಲಾಗುತ್ತಿರುವ ಈ ಹೊತ್ತಿನಲ್ಲಿ ಈ ಸಾಧನೆಯನ್ನು ಮಾಡಲಾಗಿದೆ ಎಂಬುದರಿಂದಾಗಿ. ಸಹಜ ವಾತಾವರಣದಲ್ಲಿ ಮಾಡುವ ಸಂಶೋಧನೆಗೂ ತೀರಾ ಕಲುಷಿತಗೊಂಡಿರುವ ವಾತಾವರಣದಲ್ಲಿ ಮಾಡುವ ಸಂಶೋಧನೆಗೂ ತುಂಬಾ ವ್ಯತ್ಯಾಸ ಇದೆ. ಆದ್ದರಿಂದಲೇ ಈ ಸಂಶೋಧನೆಯು ಪ್ರಾಮುಖ್ಯತೆಯನ್ನು ಪಡೆಯಬೇಕಿತ್ತು ಎಂದು ಮಾತ್ರವಲ್ಲ, ಮಾಧ್ಯಮಗಳು ಈ ಸುದ್ದಿಯ ಹಿನ್ನೆಲೆಯಲ್ಲಿ ಸಕಾರಾತ್ಮಕ ಚರ್ಚೆಯೊಂದನ್ನು ಹುಟ್ಟುಹಾಕುವುದಕ್ಕೂ ಪ್ರಯತ್ನಿಸಬೇಕಾಗಿತ್ತು ಎಂದು ಅನಿಸುವುದು. ಇಂದಿನ ಮುಸ್ಲಿಮ್ ಪ್ರತಿಕೂಲ ಪರಿಸ್ಥಿತಿಯಲ್ಲಿ ‘ಇನ್ನೋಕಾರ್ಟ್' ಸುದ್ದಿಯು ಚರ್ಚೆಗೆ ಒಳಗಾಗುತ್ತಿದ್ದರೆ ಅದು ಸಕಾರಾತ್ಮಕ ವಾತಾವರಣಕ್ಕೆ ಕಾರಣವಾಗುವುದಕ್ಕೂ ಅವಕಾಶ ಇತ್ತು. ಅಲ್ಲದೇ ಬಲಪಂಥೀಯರ ಉದ್ದೇಶವನ್ನು ವಿಫಲಗೊಳಿಸುವುದಕ್ಕೂ ಅದು ನೆರವಾಗುತ್ತಿತ್ತು. ದುರಂತ ಏನೆಂದರೆ, ಇವತ್ತು ವಿಷಯವೊಂದು ಚರ್ಚಾಸ್ಪದವಾಗಬೇಕಾದರೆ ಅದರಲ್ಲಿ ನಕಾರಾತ್ಮಕತೆ ಇರಲೇಬೇಕು ಎಂಬ ನಿಯಮವಿದೆ. ಆದ್ದರಿಂದ, ಇದನ್ನು ಮೀರುವ ಸಾಹಸ ಮಾಡಲೇಬೇಕಾಗಿದೆ. ಇಲ್ಲದಿದ್ದರೆ ಮುಂದೊಂದು ದಿನ ಸಮಾಜ ನಕಾರಾತ್ಮಕ ರೋಗಕ್ಕೆ ತುತ್ತಾಗುವ ಸಾಧ್ಯತೆ ಇಲ್ಲದಿಲ್ಲ.
Wednesday, 16 March 2016
ಬದಲಾಗಬೇಕಾದ್ದು ಬಾಹ್ಯವಲ್ಲ, ಅಂತರಂಗ...
ಶಿಶುವೊಂದು ಬೆಳೆಯುತ್ತಾ ಹೋದಂತೆ ಪ್ಯಾಂಪರ್ಸ್‍ನಿಂದ ಅಂಡರ್‍ವೇರ್‍ಗೆ, ಅಂಡರ್‍ವೇರ್‍ನಿಂದ ಚಡ್ಡಿಗೆ, ಚಡ್ಡಿಯಿಂದ ಪ್ಯಾಂಟ್, ಚೂಡಿದಾರ್, ಲಂಗಧಾವಣಿ, ಸೀರೆ ಅಥವಾ ಲುಂಗಿ ಇತ್ಯಾದಿ ಇತ್ಯಾದಿಗಳಿಗೆ ತನ್ನ ಉಡುಪನ್ನು ಬದಲಾಯಿಸುತ್ತಾ ಹೋಗುವುದು ಸಹಜ. ಆದ್ದರಿಂದಲೇ ಈ ಪ್ರಕ್ರಿಯೆಗೆ ಸಮಾಜ ಆಶ್ಚರ್ಯ ಪಟ್ಟದ್ದೂ ಇಲ್ಲ, ಆತಂಕದಿಂದ ನೋಡಿದ್ದೂ ಇಲ್ಲ. ಆದರೆ, ಚಡ್ಡಿಯನ್ನೋ ಪ್ಯಾಂಟನ್ನೋ ಧರಿಸಿ ಓಡಾಡಬೇಕಾದ ಪ್ರಾಯದ ಹುಡುಗನೋರ್ವ ಪ್ಯಾಂಪರ್ಸ್‍ಗೇ ಜೋತುಬಿದ್ದರೆ ಮತ್ತು ಹಠ ಹಿಡಿದು ಅದನ್ನೇ ಧರಿಸಿ ಓಡಾಡತೊಡಗಿದರೆ ಅದು ಅಸಹಜವಾಗಿ ಕಾಣುತ್ತದೆ. ಮಧ್ಯ ವಯಸ್ಕನೋರ್ವ ಚಡ್ಡಿಯನ್ನೇ ಶಾಶ್ವತ ಉಡುಪಾಗಿ ಆಯ್ಕೆ ಮಾಡಿಕೊಂಡಾಗಲೂ ಇಂಥದ್ದೊಂದು ಕುತೂಹಲ ಹುಟ್ಟುವುದಿದೆ. ಹಾಗಂತ, ಮಧ್ಯವಯಸ್ಕನ ಈ ಉಡುಪು ತಮಾಷೆ, ವ್ಯಂಗ್ಯ, ಅಪಹಾಸ್ಯಕ್ಕೆ ಒಳಗಾಗಬೇಕಾದ ಅಗತ್ಯ ಖಂಡಿತ ಅಲ್ಲ. ಆಯ್ಕೆಯ ಸ್ವಾತಂತ್ರ್ಯ ಇರುವಲ್ಲಿ ಅದನ್ನು ಗೌರವಿಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ. ಈ ಎಚ್ಚರಿಕೆ ಜಾಗೃತವಾಗಿರುವುದರಿಂದಲೇ ಆರೆಸ್ಸೆಸ್ ಕಳೆದ 90 ವರ್ಷಗಳಿಂದ ಸಮವಸ್ತ್ರವಾಗಿ ಪಾಲಿಸುತ್ತಾ ಬಂದಿರುವ ಖಾಕಿ ಚಡ್ಡಿಯನ್ನು ಬಹುಸಂಖ್ಯಾತ ಸಮಾಜ ತಮಾಷೆಗೆ ಬಳಸಿಕೊಂಡಿಲ್ಲ. ಕೆಲವರು ಆರೆಸ್ಸೆಸ್ಸನ್ನು ಗುರುತಿಸುವುದಕ್ಕೆ ಚಡ್ಡಿಯನ್ನು ಸಂಕೇತ ನಾಮವಾಗಿ ಬಳಕೆ ಮಾಡಿದ್ದರೂ ಚಡ್ಡಿಯ ಕಾರಣಕ್ಕಾಗಿಯೇ ಆರೆಸ್ಸೆಸ್ ಟೀಕೆಗೆ ಒಳಗಾಗಿದ್ದು ತೀರಾ ತೀರಾ ಕಡಿಮೆ. ಸಮವಸ್ತ್ರವು ಧರ್ಮ ಇಲ್ಲವೇ ಸಂಘಟನೆಗೆ ಸಂಬಂಧಿಸಿ ತೀರಾ ಖಾಸಗಿಯಾದದ್ದು. ಒಂದು ಸಂಘಟನೆ ಸಮವಸ್ತ್ರವಾಗಿ ಯಾವ ಉಡುಪನ್ನು, ಯಾವ ಬಣ್ಣವನ್ನು ಮತ್ತು ಯಾವ ಶೈಲಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹೊರಗಿನಿಂದ ನಿರ್ದೇಶಿಸುವುದು ಅವುಗಳ ಆಂತರಿಕ ವಿಷಯದಲ್ಲಿ ಮಧ್ಯ ಪ್ರವೇಶಿಸಿದಂತೆ. ಉಡುಪಿನ ಉದ್ದಳತೆಯ ಬಗ್ಗೆ ಭಿನ್ನಾಭಿಪ್ರಾಯಗಳೇನೇ ಇದ್ದರೂ ಅವನ್ನು ವ್ಯಕ್ತಪಡಿಸುವುದಕ್ಕೆ ಒಂದು ಚೌಕಟ್ಟನ್ನು ಸಮಾಜ ಸದಾ ಪಾಲಿಸುತ್ತಲೇ ಬಂದಿದೆ. ಈ ಆಧಾರದಲ್ಲಿ ಹೇಳುವುದಾದರೆ, ಖಾಕಿ ಚಡ್ಡಿಯಿಂದ ಕಂದು ಬಣ್ಣದ ಪ್ಯಾಂಟ್‍ಗೆ ಆರೆಸ್ಸೆಸ್ ತನ್ನ ಸಮವಸ್ತ್ರವನ್ನು ಬದಲಿಸುವುದು ಪಕ್ಕಾ ಆಂತರಿಕ ವಿಷಯ. ಸಾರ್ವಜನಿಕವಾಗಿ ಚರ್ಚಿಸಬೇಕಾದಷ್ಟು ಮಹತ್ವಪೂರ್ಣವಲ್ಲದ್ದು ಎಂದೂ ಹೇಳಬಹುದು. ಆದರೆ ಆರೆಸ್ಸೆಸ್‍ನ ಮಟ್ಟಿಗೆ ಇಷ್ಟನ್ನೇ ಹೇಳಿ ಪೂರ್ಣ ವಿರಾಮ ಹಾಕಬಹುದೇ? ಕಳೆದ 90 ವರ್ಷಗಳಿಂದ ಅದು ಈ ದೇಶದಲ್ಲಿ ಹೇಗೆಲ್ಲ ಗುರುತಿಗೀಡಾಗಿದೆ? ದೇಶದ ಸಾಂಸ್ಕೃತಿಕ, ರಾಜಕೀಯ, ಧಾರ್ಮಿಕ ಮತ್ತಿತರ ವಿಷಯಗಳಲ್ಲಿ ಅದು ಯಾವೆಲ್ಲ ಪಾತ್ರವನ್ನು ನಿಭಾಯಿಸಿದೆ? ಸಾವರ್ಕರ್, ಗೋಲ್ವಾಲ್ಕರ್, ಹೆಗ್ಡೇವಾರ್‍ಗಳಿಂದ ಹಿಡಿದು ಈಗಿನ ಭಾಗವತ್‍ವರೆಗೆ ಅವರು ವ್ಯಕ್ತಪಡಿಸುತ್ತಾ ಬಂದ ಅಭಿಪ್ರಾಯ, ಸಿದ್ಧಾಂತ, ವಿಚಾರಗಳು ಏನು? ಇತರೆಲ್ಲ ಸಂಘಟನೆಗಳಂತೆ ಆರೆಸ್ಸೆಸ್ಸನ್ನೂ ಸಾಮಾನ್ಯ ಸಂಘಟನೆಯಾಗಿ ಕಾಣಬಹುದೇ?ಮುಹಮ್ಮದ್ ಅಲಿ ಜಿನ್ನಾಗಿಂತ ಮೊದಲೇ ದ್ವಿ ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದು ಆರೆಸ್ಸೆಸ್. ಈ ಕುರಿತಂತೆ ದೇಶದಲ್ಲಿ ಧಾರಾಳ ಚರ್ಚೆಗಳು ಈಗಾಗಲೇ ನಡೆದಿವೆ. ಬ್ರಿಟಿಷರೊಂದಿಗೆ ಕೈ ಜೋಡಿಸಿದ ಆರೋಪ ಸಾವರ್ಕರ್ ಮೇಲಿದೆ. ಹಿಟ್ಲರ್ ಮತ್ತು ಮುಸ್ಸೋಲಿನಿಯಿಂದ ಆರೆಸ್ಸೆಸ್ ಪ್ರಭಾವಿತವಾಗಿರುವುದನ್ನು ಮತ್ತು ಅವರದೇ ಜನಾಂಗೀಯ ಸಿದ್ಧಾಂತವನ್ನು ಅದು ಭಾರತಕ್ಕೆ ಹೊಂದಿಸಿಕೊಂಡು ಪ್ರತಿಪಾದಿಸುತ್ತಿರುವುದನ್ನು ಸಾಬೀತುಪಡಿಸುವುದಕ್ಕೆ ಪುರಾವೆಗಳ ಅಗತ್ಯವೇ ಇಲ್ಲದಷ್ಟು ಇವತ್ತು ಸ್ಪಷ್ಟವಾಗಿದೆ. ಇದರ ನಾಯಕರು ಇಟಲಿಗೆ ತೆರಲಿ ಮುಸೋಲಿನಿಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಆತನ ಮನುಷ್ಯ ವಿರೋಧಿ ವಿಚಾರಧಾರೆಯನ್ನು ಕಡ ತಂದು ತಮ್ಮ ಸಿದ್ಧಾಂತದಲ್ಲಿ ಅಳವಡಿಸಿಕೊಂಡಿದ್ದಾರೆ. ಗಾಂಧೀಜಿಯವರನ್ನು ಕೊಂದ ಆರೋಪವನ್ನು ಹೊತ್ತುಕೊಂಡಿರುವುದೂ ಇದೇ ಆರೆಸ್ಸೆಸ್. ಆ ಕಾರಣಕ್ಕಾಗಿಯೇ ಅದು ನಿಷೇಧಕ್ಕೂ ಒಳಪಟ್ಟಿತು. ಆರೆಸ್ಸೆಸ್‍ನ ಸ್ವಾತಂತ್ರ್ಯಪೂರ್ವ ಇತಿಹಾಸವೇ ಇಷ್ಟು ಉಜ್ವಲವಾಗಿರುವಾಗ ಇನ್ನು ಸ್ವಾತಂತ್ರ್ಯಾನಂತರದ ಇತಿಹಾಸವನ್ನು ವಿವರವಾಗಿ ಮಂಡಿಸಬೇಕಿಲ್ಲವಲ್ಲ. ಲಕ್ಷಕ್ಕಿಂತಲೂ ಅಧಿಕ ಶಾಖೆಗಳಿರುವ ಮತ್ತು 60ಕ್ಕಿಂತಲೂ ಅಧಿಕ ಉಪ ಸಂಘಟನೆಗಳನ್ನು ಹೊಂದಿರುವ ಆರೆಸ್ಸೆಸ್, ಹಿಂದೂ ರಾಷ್ಟ್ರ ಕಲ್ಪನೆಯೊಂದಿಗೆ ಹುಟ್ಟಿಕೊಂಡಿದೆ. ಈ ರಾಷ್ಟ್ರ ಕಲ್ಪನೆ ಎಷ್ಟು ಅಪಾಯಕಾರಿಯೆಂದರೆ, ಈ ಹಿಂದೂ ರಾಷ್ಟ್ರದಲ್ಲಿ ಸರ್ವರೂ ಸಮಾನರಲ್ಲ. ಮುಸ್ಲಿಮರು, ಕ್ರೈಸ್ತರೆಲ್ಲ ಇಲ್ಲಿ ದ್ವಿತೀಯ ದರ್ಜೆಯ ನಾಗರಿಕರು. ಆರ್ಯ ಜನಾಂಗೀಯ ಮೇಲ್ಮೆಯನ್ನು ಬಹಿರಂಗವಾಗಿ ಇವತ್ತು ಅದು ಪ್ರತಿಪಾದಿಸದಿದ್ದರೂ ಆಂತರಿಕವಾಗಿ ಅದರ ನಡೆ-ನುಡಿಗಳು ಅದನ್ನೇ ಬಿಂಬಿಸುತ್ತವೆ ಎಂದು ಹೇಳಲಾಗುತ್ತದೆ. ಈ ದೇಶದ ದಲಿತ, ಕೊರಗ, ದುರ್ಬಲ, ಆದಿವಾಸಿ ಜನಾಂಗಗಳ ಆರಾಧನಾ ಪದ್ಧತಿಯನ್ನು ಮತ್ತು ಆರಾಧ್ಯರನ್ನು ಅನಾಮತ್ತಾಗಿ ಆಪೋಶನ ಪಡಕೊಂಡ ಮತ್ತು ಪಡಕೊಳ್ಳುತ್ತಿರುವ ಆರೋಪವೂ ಆರೆಸ್ಸೆಸ್‍ನ ಮೇಲಿದೆ. ವರ್ಣಾಶ್ರಮವನ್ನು ವೃತ್ತಿಸೂಚಕವೆಂದು ವ್ಯಾಖ್ಯಾನಿಸುತ್ತಾ ಯಾರಿಗೆ ಬೇಕಾದರೂ ಬ್ರಾಹ್ಮಣನಾಗಬಹುದು ಎಂದು ಅದು ಸಮರ್ಥಿಸಿಕೊಳ್ಳುತ್ತದೆ. ಆದರೆ ಅದರ ಲಕ್ಷಾಂತರ ಶಾಖೆಗಳಲ್ಲಿ ಒಬ್ಬನೇ ಒಬ್ಬ ದಲಿತನನ್ನಾದರೂ ಬ್ರಾಹ್ಮಣನಾಗಿ ಪರಿವರ್ತಿಸಲಾಗಿದೆಯೇ ಎಂಬ ಪ್ರಗತಿಪರರ ಪ್ರಶ್ನೆಗೆ ಈ ವರೆಗೂ ಅದರಿಂದ ಸಮರ್ಪಕ ಉತ್ತರ ಬಂದೇ ಇಲ್ಲ. ನಾಲ್ಕೈದು ತಿಂಗಳ ಹಿಂದಷ್ಟೇ ಅದು ಮೀಸಲಾತಿಯ ವಿರುದ್ಧ ಮಾತಾಡಿತ್ತು. ದಲಿತ ಸಮುದಾಯದ ಆಹಾರ ಪದ್ಧತಿಯನ್ನು ದೈವವಿರೋಧಿಯಾಗಿ ಬಣ್ಣಿಸಿ ನಿಷೇಧ ಹೇರಲು ಒತ್ತಾಯಿಸುತ್ತಿರುವುದೂ ಈ ಸಂಘಟನೆಯೇ. ಈ ದೇಶದಲ್ಲಿ ನಡೆದ ಹೆಚ್ಚಿನೆಲ್ಲ ಹತ್ಯಾಕಾಂಡಗಳ ಕುರಿತಂತೆ ಆರೆಸ್ಸೆಸ್ಸನ್ನು ಆರೋಪಿ ದೃಷ್ಟಿಯಿಂದಲೇ ನೋಡಲಾಗುತ್ತಿದೆ. ಅದರ ಗರಡಿಯಲ್ಲಿ ಪಳಗಿದ ರಾಜಕೀಯ ಅಥವಾ ಸಾಮಾಜಿಕ ನಾಯಕರು ಪ್ರತಿ ಸಂದರ್ಭದಲ್ಲೂ ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಿಯೇ ಮಾತಾಡುತ್ತಾರೆ. ಮುಸ್ಲಿಮರನ್ನು ತುಚ್ಛೀಕರಿಸುತ್ತಾರೆ. ಸಮ್ಜೋತಾ ಎಕ್ಸ್ ಪ್ರೆಸ್, ಮಕ್ಕಾ, ಮಾಲೆಗಾಂವ್ ಮುಂತಾದ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವವರಿಗೂ ಆರೆಸ್ಸೆಸ್‍ಗೂ ನಂಟಿದೆ ಎಂದು ಅನೇಕ ಬಾರಿ ಈ ದೇಶದ ಮಾಧ್ಯಮಗಳಲ್ಲಿ ಚರ್ಚೆಯಾಗಿದೆ. ಒಂದು ರೀತಿಯಲ್ಲಿ, ಆರೆಸ್ಸೆಸ್ ತನ್ನ ಹುಟ್ಟಿನಿಂದ ಈವತ್ತಿನವರೆಗೂ ಇಬ್ಬಗೆಯ ನೀತಿಯನ್ನು ಅಳವಡಿಸುತ್ತಲೇ ಬಂದಿದೆ. ಕನ್ಹಯ್ಯಾ ಕುಮಾರ್‍ನನ್ನು ದೇಶದ್ರೋಹಿ ಎಂದು ಕರೆದಿರುವ ಇದೇ ಸಂಘಟನೆ ಶ್ರೀಶ್ರೀ ರವಿಶಂಕರ್ ಅವರ 'ಪಾಕಿಸ್ತಾನ್ ಜಿಂದಾಬಾದ್'ಗೆ ಯಾವ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿಲ್ಲ. ಅದು ನ್ಯಾಯವನ್ನು ಪ್ರತಿಪಾದಿಸುವ ಪ್ರತಿ ಸಂದರ್ಭದಲ್ಲೂ ತನ್ನವರು ಮತ್ತು ಇತರರು ಎಂಬ ಮಾನದಂಡವನ್ನು ಸದಾ ಪಾಲಿಸುತ್ತಲೇ ಬಂದಿವೆ.
ಅದು ಪ್ರತಿಪಾದಿಸುವ ದೇಶಪ್ರೇಮ, ಸಂಸ್ಕೃತಿ, ಧರ್ಮ, ನಾಗರಿಕತೆ, ಸ್ವಾತಂತ್ರ್ಯ ಮುಂತಾದ ಎಲ್ಲದಕ್ಕೂ ನಾವು ಕಲ್ಪಿಸಿಕೊಂಡಿರುವ ಮತ್ತು ಸಂವಿಧಾನ ಕೊಡಮಾಡಿರುವ ಅರ್ಥಕ್ಕಿಂತ ಭಿನ್ನವಾದದ್ದೊಂದು ಆಯಾಮವಿದೆ. ಬಾಹ್ಯನೋಟಕ್ಕೆ ಅದು ಭಾರತೀಯ ಸಂಸ್ಕೃತಿ ಎಂದು ಹೇಳುತ್ತಿದ್ದರೂ ಆಂತರಿಕವಾಗಿ ಆ ಸಂಸ್ಕೃತಿ ಪೂರ್ಣವಾಗಿ ಆರ್ಯನ್ ಸಂಸ್ಕೃತಿಯ ಕುರಿತಾಗಿರುವುದಾಗಿ ಅದರ ಒಳಹೊಕ್ಕು ಹೊರಬಂದ ನಾಯಕರು ಬಹಿರಂಗಪಡಿಸುತ್ತಿರುತ್ತಾರೆ. ಆರೆಸ್ಸೆಸ್‍ನ ಈ ಒಳಗೊಂದು ಹೊರಗೊಂದು ನೀತಿಯೇ ಅದರ ಮೇಲೆ ಸಾರ್ವಜನಿಕ ಗುಮಾನಿಯನ್ನು ಹೆಚ್ಚಿಸಿದೆಯೆಂದು ಖಂಡಿತ ಹೇಳಬಹುದು. ಆರೆಸ್ಸೆಸ್ ತೀರಾ ಸಾಧುವಲ್ಲ. ಅದು ಸರ್ವ ಸಮಾನತೆಯ ಪ್ರತಿಪಾದಕವೂ ಅಲ್ಲ. ಅದು ಸಾಂಸ್ಕೃತಿಕ ಸಂಘಟನೆಯೂ ಅಲ್ಲ. ಕಳೆದ 90 ವರ್ಷಗಳಲ್ಲಿ ಅದರ ಮೇಲೆ ಕೇಳಿ ಬಂದಿರುವ ದೂರು ಹಾಗೂ ಅದರ ಕಾರ್ಯಕರ್ತರು ಮತ್ತು ನಾಯಕರ ನಡವಳಿಕೆಗಳು ಅದು ಖಾಕಿ ಚಡ್ಡಿಯಿಂದ ಕಂದು ಬಣ್ಣಕ್ಕೆ ಸಮವಸ್ತ್ರ ಬದಲಿಸಿದಷ್ಟು ಅಹಿಂಸಾತ್ಮಕವಾದುದಲ್ಲ. ಪ್ರತಿ ಹೆಜ್ಜೆಯಲ್ಲೂ ಅದರ ಉದ್ದೇಶ ಶುದ್ಧಿಯನ್ನು ಪ್ರಶ್ನಿಸುವ ಗುರುತುಗಳಿವೆ. ಆದ್ದರಿಂದ ಆರೆಸ್ಸೆಸ್ ಖಾಕಿಯಿಂದ ಕಂದುಬಣ್ಣಕ್ಕೆ ತಿರುಗುವುದರಿಂದ ಈ ಎಲ್ಲ ಕಳಂಕಗಳು ಕಳೆದು ಹೋಗುವುದಿಲ್ಲ. ತನ್ನ ಧೋರಣೆ ಮತ್ತು ಮನುಷ್ಯ ವಿರೋಧಿ ವಿಚಾರಧಾರೆಯನ್ನು ಕೈಬಿಡದ ಹೊರತು ಉಡುಪಿನ ಬಣ್ಣ ಮತ್ತು ಉದ್ದಳತೆಯಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಯಾವ ಪ್ರಯೋಜನವೂ ಇಲ್ಲ. ಸಂಘಟನೆಯ ಧೋರಣೆ ಬದಲಾಗದಿದ್ದರೆ ಚಡ್ಡಿಯೋ ಪ್ಯಾಂಟೋ ಖಾಕಿಯೋ ಕಂದೋ ಯಾವ ಬಣ್ಣವಾದರೇನು? ಅದರಿಂದ ಈ ದೇಶಕ್ಕೆ ಆಗುವ ಲಾಭವೇನು? ಮೊದಲು ಅದರ ಧೋರಣೆ ಬದಲಾಗಲಿ. ಬಳಿಕ ‘ಬಣ್ಣ'ವನ್ನು ಬದಲಾಯಿಸಿಕೊಳ್ಳಲಿ.
Friday, 4 March 2016
ನಾಶವಾಗಬೇಕಾದದ್ದು ಧರ್ಮವೋ?
ಸಂಸದರೋರ್ವರ
ಮತಿಗೆಟ್ಟ ಹೇಳಿಕೆಯನ್ನು ಸಂಪಾದಕೀಯಕ್ಕೆ ವಸ್ತುವಾಗಿ ಆಯ್ಕೆ
ಮಾಡಿಕೊಳ್ಳುವುದು ಉಚಿತವೋ ಅಥವಾ ಹಾಗೆ ಮಾಡುವುದು ಸಂಪಾದಕೀಯದಘನತೆಗೆ ಕಳಂಕವೋ ಎಂಬ ಬಗ್ಗೆ ಒಂದಕ್ಕಿಂತ ಹೆಚ್ಚು ಬಾರಿ ಆಲೋಚಿಸಿ ಕೊನೆಗೆ ಅವರೆತ್ತಿದ ವಿಷಯವು ಅವರ ಸಡಿಲ ನಾಲಗೆಯಷ್ಟು ಹಗುರವಲ್ಲವಾದುದರಿಂದ ಆ ಬಗ್ಗೆ ಪ್ರತಿಕ್ರಿಯಿಸಲೇಬೇಕಾದ ಅಗತ್ಯ ತಲೆದೋರಿತು. ಭಯೋತ್ಪಾದನೆಗೂ ಧರ್ಮಕ್ಕೂ ನಂಟಿದೆಯೇ? ಇದ್ದರೆ ಆ ನಂಟು ಯಾವ ಬಗೆಯದು? ಅಂಥದ್ದೊಂದು ನಂಟನ್ನು ಏರ್ಪಡಿಸಿದವರು ಯಾರು? ಧಾರ್ಮಿಕ ವಿದ್ವಾಂಸರೇ, ಧರ್ಮಗ್ರಂಥಗಳೇ ಅಥವಾ ಸ್ವತಃ ಭಯೋತ್ಪಾದಕರೇ? ಅಷ್ಟಕ್ಕೂ, ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯವರು ಭಯೋತ್ಪಾದನೆಯನ್ನು ನೋಡುವ ಬಗೆ ಹೇಗೆ? ಬಾಂಬ್ ಸ್ಫೋಟ, ಹತ್ಯೆ, ಅತ್ಯಾಚಾರ, ಹಿಂಸೆ.. ಇತ್ಯಾದಿ ಇತ್ಯಾದಿಗಳನ್ನೇ ಅವರು ಭಯೋತ್ಪಾದನೆ ಅನ್ನುತ್ತಾರಾದರೆ, ಇವೇನು ಇವತ್ತು ಯಾವುದಾದರೊಂದು ನಿರ್ದಿಷ್ಟ ಧರ್ಮದ ಸೊತ್ತಾಗಿಯಷ್ಟೇ ಉಳಿದಿದೆಯೇ? ಹಿಂಸೆ, ಅತ್ಯಾಚಾರ, ಹತ್ಯೆ ಯಾವ ಧರ್ಮದ ಗುರುತು? ಇಸ್ಲಾಮ್‍ನದ್ದೇ, ಹಿಂದೂ ಧರ್ಮದ್ದೇ ಅಥವಾ ಕ್ರೈಸ್ತ-ಬೌದ್ಧ, ಯಹೂದಿ ಧರ್ಮದ್ದೇ? ಮೀಸಲಾತಿಯನ್ನು ಆಗ್ರಹಿಸಿ ಜಾಟ್ ಸಮುದಾಯದವರು ಕಳೆದ ವಾರ ಹರ್ಯಾಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ 17 ಸಾವಿರ ಮರಗಳ ಮಾರಣ ಹೋಮ ನಡೆದಿದೆ ಎಂದು ಜಿಂದ್, ಬಿವಾನಿ, ಹಿಸ್ಸಾರ್, ಜಜ್ಜಾರ್, ಸೋನಿಪತ್‍ನ ಅರಣ್ಯಾಧಿಕಾರಿಗಳು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದುವು. ಮರಗಳನ್ನು ಕಡಿದು ರಸ್ತೆಗೆ ಹಾಕಲಾಗಿತ್ತು. ಇದಕ್ಕಿಂತಲೂ ಭೀಭತ್ಸಕರ ಸಂಗತಿ ಏನೆಂದರೆ, ಹೀಗೆ ರಸ್ತೆಯಲ್ಲಿ ಸಿಕ್ಕಿ ಹಾಕಿಕೊಂಡ ವಾಹನಗಳಿಂದ ಅನೇಕ ಮಹಿಳೆಯರನ್ನು ಪಕ್ಕದ ಹೊಲಗಳಿಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ ಎಂಬುದು. ಅನಂತ ಕುಮಾರ್ ಹೆಗಡೆಯವರ ಪ್ರಕಾರ ಇದು ಯಾವ ಕೆಟಗರಿಯಲ್ಲಿ ಬರುತ್ತದೆ? ಈ ಕೃತ್ಯವನ್ನು ಎಸಗಿದವರ ಧರ್ಮವನ್ನು ನೋಡಿಕೊಂಡು, ‘ಆ ಧರ್ಮದ ನಾಶವೇ ಇಂಥ ಕೃತ್ಯಗಳಿಗಿರುವ ಪರಿಹಾರ’ ಎಂದು ಹೇಳಬಹುದೇ? ಹೆಗಡೆ ಅವರ ಜಾತಿಯನ್ನು ನೇಪಾಳದಲ್ಲಿ ಪ್ರತಿನಿಧಿಸುವ ‘ಮಾಧೇಶಿ’ಗಳು ಎರಡು ತಿಂಗಳುಗಳ ಕಾಲ ಭಾರತ-ನೇಪಾಳದ ಗಡಿಯಲ್ಲಿ ರಸ್ತೆ ತಡೆ ನಿರ್ಮಿಸಿದ್ದರು. ಭಾರತದಿಂದ ನೇಪಾಳಕ್ಕೆ ಆಹಾರ, ತೈಲ ಸಹಿತ ದಿನ ಬಳಕೆಯ ಪ್ರತಿಯೊಂದು ವಸ್ತುವೂ ಸರಬರಾಜಾಗುವ ಏಕೈಕ ರಸ್ತೆಯನ್ನು ಮುಚ್ಚಿದ್ದರು. ಇದರಿಂದಾಗಿ ನೇಪಾಳದ ಮಾರುಕಟ್ಟೆ ಬಹುತೇಕ ಹದಗೆಟ್ಟಿತ್ತು. ನೇಪಾಳೀಯರು ಆಹಾರ ಮತ್ತಿತರ ವಸ್ತುಗಳ ತೀವ್ರ ಕೊರತೆಯನ್ನು ಎದುರಿಸಿದರು. ಅಲ್ಲಿನ ಜನರು ಪ್ರಸಕ್ತ ಸಂವಿಧಾನಕ್ಕೆ ಬೆಂಬಲ ಸೂಚಿಸಿದುದೇ ಈ ಪ್ರತಿಭಟನೆಗೆ ಕಾರಣವಾಗಿತ್ತು. ನರೇಂದ್ರ ಮೋದಿ ಸರಕಾರದ ಪರೋಕ್ಷ ಬೆಂಬಲದಿಂದಾಗಿಯೇ ಇಷ್ಟು ದೀರ್ಘ ಅವಧಿಯ ರಸ್ತೆ ತಡೆ ನಿರ್ಮಿಸಲು ಮಾಧೇಶಿಗಳಿಗೆ ಸಾಧ್ಯವಾಗಿದೆ ಎಂದು ನೇಪಾಳ ಸರಕಾರವೇ ಆರೋಪಿಸಿತ್ತು. ಇದರ ದೃಢೀಕರಣವೆಂಬಂತೆ ಮಾಧೇಶಿ ನಾಯಕರು ಭಾರತಕ್ಕೆ ಬಂದು ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್‍ರನ್ನು ಭೇಟಿಯಾದರು. ಒಂದು ಜನತೆಯ ಮೇಲೆ ಎರಡು ತಿಂಗಳ ಕಾಲ ಆಹಾರ ಭಯೋತ್ಪಾದನೆಯನ್ನು ಹೇರಿದ ಬಗ್ಗೆ ಅನಂತ ಕುಮಾರ್ ಅವರ ನಿಲುವೇನು? ಈ ಕೃತ್ಯ ಅವರ ಪ್ರಕಾರ ಯಾವ ವಿಭಾಗದಲ್ಲಿ ಬರುತ್ತದೆ? ಮಾಧೇಶಿಗಳ ಧರ್ಮವನ್ನು ನೋಡಿಕೊಂಡು, ‘ಆ ಧರ್ಮದ ನಾಶವೇ ಇಂಥ ಭಯೋತ್ಪಾದನೆಗಿರುವ ಪರಿಹಾರ’ ಎಂದು ಹೇಳುತ್ತಾರಾ? ದಾದ್ರಿ, ಮುಝಫ್ಫರ್ ನಗರ್, ಗುಜರಾತ್‍ಗಳಲ್ಲಿ ನಡೆದಿರುವುದೇನೆಂಬುದು ಹೆಗಡೆಯವರಿಗೆ ಚೆನ್ನಾಗಿ ಗೊತ್ತು. ಅಲ್ಲಿ ಯಾವ ಬಗೆಯ ಭಯದ ವಾತಾವರಣವನ್ನು ಹುಟ್ಟು ಹಾಕಲಾಗಿತ್ತು ಮತ್ತು ಅದರ ರೂವಾರಿಗಳು ಯಾರು ಎಂಬುದನ್ನು ವಿವರಿಸಬೇಕಾದ ಅಗತ್ಯವೂ ಇಲ್ಲ. ಮಾಯಾ ಕೊಡ್ನಾನಿ, ಬಾಬು ಭಜರಂಗಿ ಸಹಿತ ಗುಜರಾತ್ ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲುದಾರರಾದ ದೊಡ್ಡದೊಂದು ಗುಂಪು ಇವತ್ತು ಯಾವ್ಯಾವ ಜೈಲುಗಳಲ್ಲಿವೆ ಮತ್ತು ಇವರ ಬಗ್ಗೆ ನ್ಯಾಯಾಲಯಗಳು ಏನೇನು ಹೇಳಿವೆ ಎಂಬುದನ್ನೂ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಸಾದ್ವಿ ಪ್ರಜ್ಞಾಸಿಂಗ್, ಪುರೋಹಿತ್, ಆಸೀಮಾನಂದರುಗಳು ಕಳೆದ ನಾಲ್ಕೈದು ವರ್ಷಗಳಿಂದ ಆರೋಪವನ್ನು ಹೊತ್ತು ಜೈಲಲ್ಲಿದ್ದಾರೆ ಎಂಬುದನ್ನು ಹೆಗಡೆಯವರು ಚೆನ್ನಾಗಿಯೇ ಬಲ್ಲರು. ಇಷ್ಟಿದ್ದೂ ಹೆಗಡೆಯವರು ತೀರಾ ಅಜ್ಞಾನಿಯಂತೆ ಮತ್ತು ಎಲ್‍ಕೆಜಿ ಮಗುವಿನಂತೆ ಮಾತಾಡಿರುವುದಕ್ಕೆ ಕಾರಣ ಏನು? ಸಿರಿಯಾ, ಇರಾಕ್, ಯಮನ್ ಮತ್ತಿತರ ಕಡೆ ನಡೆಯುತ್ತಿರುವ ಹಿಂಸೆ, ಹತ್ಯೆ, ಸಾಮೂಹಿಕ ವಲಸೆಗಳನ್ನು ನೋಡಿ ಹೆಗಡೆಯವರು ಈ ನಿರ್ಧಾರಕ್ಕೆ ಬಂದಿರುವರಾದರೆ, ತಮ್ಮ ಅರಿವಿನ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆಯೆಂದು ಅವರಿಗೆ ಹೇಳಬೇಕಾಗುತ್ತದೆ. ಅರಬ್ ವಲಯದ ಹಿಂಸಾಚಾರಗಳಿಗೆ ಭೌಗೋಳಿಕವಾದ ಕಾರಣ ಇದೆ. ರಾಜ ಪ್ರಭುತ್ವದ ವಿರುದ್ಧ ಸಿಡಿದೆದ್ದ ಪ್ರಜಾ ಚಳವಳಿಯು ಕ್ರಮೇಣ ಹಳಿತಪ್ಪಿ ವಿಧ್ವಂಸಕ ಶಕ್ತಿಗಳು ಆಪೋಶನ ಪಡೆದುದರ ಫಲಿತಾಂಶ ಅದು. ಅಲ್ಲಿನ ಸಂಘರ್ಷವೇ ಗೋಜಲುಗಳ ಗುಢಾಣ. ಯಾರು ಸಾಚಾ ಯಾರು ನಕಲಿ ಎಂಬುದನ್ನು ತಕ್ಷಣಕ್ಕೆ ತೀರ್ಮಾನಿಸದಷ್ಟು ಆ ‘ರಣಾಂಗಣ’ ಮನುಷ್ಯ ವಿರೋಧಿಯಾಗಿ ಬಿಟ್ಟಿದೆ. ಬಾಹ್ಯನೋಟಕ್ಕೆ, ರಶ್ಯಾವು ಅಸದ್‍ರ ಪರ ಮತ್ತು ಐಸಿಸ್‍ನ ವಿರುದ್ಧ ಹೋರಾಡುತ್ತಿದೆ. ಅಮೇರಿಕವಾದರೋ ಅಸದ್‍ರ ವಿರುದ್ಧ ಮತ್ತು ಐಸಿಸ್‍ನೊಂದಿಗೆ ಮೃದುವಾಗಿ ವರ್ತಿಸುತ್ತಿದೆ. ಸಂಪೂರ್ಣ ಆಂತರಿಕವಾಗಿರುವ ಯಮನ್ ಸಂಘರ್ಷದಲ್ಲಿ ಸೌದಿ ಒಂದು ಪಕ್ಷವನ್ನು ಬೆಂಬಲಿಸುತ್ತಿದೆ. ಅಷ್ಟಕ್ಕೂ ಐಸಿಸ್‍ಗೆ, ಯಮನ್‍ನ ಆಡಳಿತ ವಿರೋಧಿ ಗುಂಪಿಗೆ, ಕುರ್ದ್‍ಗಳಿಗೆ, ಶಿಯಾ-ಸುನ್ನಿ ಜಗಳಕೋರರಿಗೆ ಶಸ್ತ್ರಾಸ್ತ್ರ ಸರಬರಾಜು ಎಲ್ಲಿಂದ? ಅವರ ಆದಾಯ ಮೂಲ ಯಾವುದು? ಒಂದು ರಾಷ್ಟ್ರಕ್ಕೇ ಸವಾಲು ಒಡ್ಡಬಹುದಾದಷ್ಟು ಆಧುನಿಕ ಶಸ್ತ್ರಾಗಳು ಈ ಸಾಮಾನ್ಯ ಜನರ ಗುಂಪಿಗೆ ಸರಬರಾಜು ಮಾಡುತ್ತಿರುವವರು ಯಾರು, ಅವರ ಉದ್ದೇಶವೇನು ಎಂಬುದನ್ನೆಲ್ಲ ಸಂಸದರಾಗಿರುವ ಅನಂತ ಹೆಗಡೆಯವರಿಗೆ ವಿವರಿಸಬೇಕಿಲ್ಲ. ಅರಬ್ ವಲಯ ಸಂಘರ್ಷ ಪೀಡಿತವಾಗಿರುವಷ್ಟೂ ದಿನ ಅಮೆರಿಕ ಸಹಿತ ಯುರೋಪಿಯನ್ ರಾಷ್ಟ್ರಗಳು ಸುಖವಾಗಿರುತ್ತವೆ. ಅವುಗಳ ಅರ್ಥವ್ಯವಸ್ಥೆ ಸುಸ್ಥಿತಿಯಲ್ಲಿರುತ್ತದೆ. ಶಸ್ತ್ರಾಸ್ತ್ರಗಳ ಉತ್ಪಾದನೆ ಮತ್ತು ಮಾರಾಟ ಭರ್ಜರಿಯಾಗಿ ನಡೆಯುತ್ತಿರುತ್ತದೆ. ಬಹುಶಃ ಇಸ್ರೇಲ್‍ನ್ನು ಅರಬ್ ಜಗತ್ತಿನ ನಡುವೆ ಹುಟ್ಟು ಹಾಕಿರುವುದರ ಹಿಂದಿನ ಉದ್ದೇಶ ಇದುವೇ ಇರಬೇಕು. ಎಲ್ಲಿಯವರೆಗೆ ಇಸ್ರೇಲ್‍ನ ಅಸ್ತಿತ್ವ ಇರುತ್ತದೋ ಅಲ್ಲಿಯವರೆಗೆ ಅರಬ್ ಜಗತ್ತಿನಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಇಸ್ರೇಲ್ ಪರ, ವಿರುದ್ಧ ಮತ್ತು ತಟಸ್ಥ ಎಂಬುದಾಗಿ ಅರಬ್ ಜಗತ್ತು ವಿಭಜನೆಗೊಳ್ಳುವುದು ಮತ್ತು ಆ ಕಾರಣದಿಂದಾಗಿಯೇ ಪರಸ್ಪರ ಸದಾ ಸಂದೇಹದಿಂದಲೇ ಬದುಕುವುದು ಅನಿವಾರ್ಯವಾಗುತ್ತದೆ. ಈ ವಾತಾವರಣವು ಶಸ್ತ್ರಾಸ್ತ್ರ ಖರೀದಿಗೆ ಪೈಪೋಟಿಯನ್ನು ಪ್ರಚೋದಿಸುತ್ತದೆ. ಈ ವಾತಾವರಣವನ್ನು ಒಪ್ಪದ ಮಂದಿ ಪ್ರತಿಭಟನೆಗಿಳಿಯುತ್ತಾರೆ. ಈ ಪ್ರತಿಭಟನೆಯನ್ನು ಇನ್ನಾರೋ ಹೈಜಾಕ್ ಮಾಡುತ್ತಾರೆ. ಅವರ ಕೈಗೆ ಆಧುನಿಕ ಶಸ್ತ್ರಾಸ್ತ್ರಗಳು ಬರುತ್ತವೆ. ಅಂದಹಾಗೆ, ಈ ಪ್ರಕ್ರಿಯೆಯನ್ನು ನಾವು ಅರಬ್ ಜಗತ್ತಿಗೆ ಮಾತ್ರ ಸೀಮಿತಗೊಳಿಸಬೇಕಿಲ್ಲ. ಮುಂದೊಂದು ದಿನ ಭಾರತೀಯ ಉಪಭೂಖಂಡದಲ್ಲೂ ಇಸ್ರೇಲ್‍ನಂಥ ಖೊಟ್ಟಿ ರಾಷ್ಟ್ರವೊಂದನ್ನು ಅಮೇರಿಕ ಸಹಿತ ಬಲಾಢ್ಯ ರಾಷ್ಟ್ರಗಳು ಹುಟ್ಟು ಹಾಕಬಹುದು. ಪಾಕ್‍ನ ಭಾಗವಾಗಿರುವ ಬಲೂಚಿಸ್ತಾನ ಮತ್ತು ಅದರ ವಶದಲ್ಲಿರುವ ಕಾಶ್ಮೀರವನ್ನು ಒಟ್ಟು ಸೇರಿಸಿ ಪ್ರತ್ಯೇಕ ರಾಷ್ಟ್ರ ಕಟ್ಟುವ ಯೋಜನೆ ರೂಪಿಸಬಹುದು. ಈ ಎರಡೂ ಪ್ರದೇಶಗಳು ಚೀನಾದ ಗಡಿಯನ್ನು ಹಂಚಿಕೊಂಡಿದ್ದು, ಇಂಥದ್ದೊಂದು ರಾಷ್ಟ್ರ ಅಸ್ತಿತ್ವಕ್ಕೆ ಬಂದರೆ ಭಾರತಕ್ಕೆ ಚೀನಾದ ಭೀತಿ ಕಡಿಮೆಯಾಗುತ್ತದೆ, ಚೀನಾದೊಂದಿಗೆ ಗಡಿ ಹಂಚುವಿಕೆಯೂ ತಪ್ಪುತ್ತದೆ ಎಂದು ಅದು ನಂಬಿಸಬಹುದು. ಆ ಬಳಿಕ ಈ ‘ಕೂಸ’ನ್ನು ಇಟ್ಟುಕೊಂಡು ಭಾರತ-ಪಾಕ್-ಚೀನಾಗಳ ಮಧ್ಯೆ ಸಂದೇಹವನ್ನು ಹುಟ್ಟಿಸಿ ಶಸ್ತ್ರಾಸ್ತ್ರ ಮಾರಾಟಕ್ಕೆ ಚಾಲನೆ ಕೊಡಬಹುದು. ಬಹುಶಃ ಇಂಥದ್ದೊಂದು ಸಮೀಕರಣವನ್ನು ಅನಂತ ಹೆಗಡೆಯವರು ಮಾಡಿರುವರೋ ಇಲ್ಲವೋ ಆದರೆ, ಇದು ಅಸಂಭವವಲ್ಲ. ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ನೋಡುವುದಾದರೆ ಇಂಥದ್ದೊಂದು ಸಂಭವನೀಯತೆಯನ್ನು ಉಡಾಫೆಯಿಂದ ನಿರ್ಲಕ್ಷಿಸಬೇಕಾಗಿಯೂ ಇಲ್ಲ. ಒಂದು ವೇಳೆ, ಆ ಸಂದರ್ಭದಲ್ಲಿ ಇಲ್ಲಿ ಹುಟ್ಟಿಕೊಳ್ಳಬಹುದಾದ ಪ್ರತಿಭಟನೆ ಮತ್ತು ಆ ಪ್ರತಿಭಟನೆಯನ್ನು ಶಸ್ತ್ರಾಸ್ತ್ರ ವ್ಯಾಪಾರಿಗಳು ಹೈಜಾಕ್ ಮಾಡಿ ಹಿಂಸಾತ್ಮಕಗೊಳಿಸಿದರೆ ಏನಾಗಬಹುದು? ಆ ಖರೀದಿಗೊಂಡ ಪ್ರತಿಭಟನಾಕಾರರ ಉಡುಪು, ಧಾರ್ಮಿಕ ಚಿಹ್ನೆ, ಭಾಷೆಯನ್ನು ನೋಡಿಕೊಂಡು ಅವರ ಧರ್ಮದ ಮೇಲೆ ಆ ಹಿಂಸೆಯ ಆರೋಪವನ್ನು ಹೊರಿಸಬಹುದೇ? ಅವರ ಧರ್ಮವೇ ಅದಕ್ಕೆ ಕಾರಣ ಎಂದು ಹೇಳಬಹುದೇ?
ಹಿಂಸಾನಿರತರು ಪೈಜಾಮ, ಗಡ್ಡ ಧರಿಸಿದ್ದಾರೆಂದೂ ಅಲ್ಲಾಹು ಅಕ್ಬರ್ ಹೇಳುತ್ತಾರೆಂದೂ ವಾದಿಸಿ, ಅವರ ಕೃತ್ಯಗಳಿಗೆ ಇಸ್ಲಾಮೇ ಕಾರಣ ಎಂದು ಹೇಳುವುದು ಅತ್ಯಂತ ಬೇಜವಾಬ್ದಾರಿ ನಿಲುವಾಗುತ್ತದೆ. ಅತ್ಯಾಚಾರ ನಡೆಸುವ ಮತ್ತು ಭ್ರೂಣವನ್ನು ಕತ್ತಿಯ ಮೊನೆಗೆ ಸಿಕ್ಕಿಸಿ ಸಂಭ್ರಮಿಸುವ ವ್ಯಕ್ತಿ ‘ಹರಹರ ಮಹಾದೇವ್’ ಎಂದು ಘೋಷಿಸುವುದರಿಂದ ಅದು ಹಿಂದೂ ಧರ್ಮದ ಕೃತ್ಯವಾಗುತ್ತದೆಯೇ? ಆ ಕಾರಣಕ್ಕಾಗಿ ಹಿಂದೂ ಧರ್ಮವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬಹುದೇ? ಆದ್ದರಿಂದ ಅನಂತ ಕುಮಾರ್ ಹೆಗಡೆಯವರ ಮಾತು ಅತ್ಯಂತ ಖಂಡನೀಯ. ಓರ್ವ ಸಂಸದರಾಗಿ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು. ನಿಜವಾಗಿ, ನಾಶ ಮಾಡಬೇಕಾದದ್ದು ಧರ್ಮವನ್ನಲ್ಲ, ಧರ್ಮಾಂಧತೆಯನ್ನು. ಈ ಧರ್ಮಾಂಧತೆ ಎಲ್ಲ ಧರ್ಮಾನುಯಾಯಿಗಳಲ್ಲೂ ಇವೆ. ‘ಹೆಗಡೆ’ ತನ್ನ ಬಣ್ಣದ ಕನ್ನಡಕವನ್ನು ಕಳಚಿಟ್ಟು ನೋಡಲಿ.
Thursday, 25 February 2016
‘ಕಾವಲುನಾಯಿ’ಯನ್ನು ಗಲ್ಲಿಗೇರಿಸುವ ‘ಸುದ್ದಿಮನೆ’ಗಳು
![]() |
| ವಿಶ್ವ ದೀಪಕ್ |
ಅಂದಹಾಗೆ, ಪ್ರಜಾತಂತ್ರವನ್ನು ರಾಜಕಾರಣಿಗಳ ಕೈಗೆ ಒಪ್ಪಿಸಿ ಬಿಟ್ಟು ಸುಮ್ಮನಾದರೆ ಏನೆಲ್ಲ ಅನಾಹುತಗಳಾಗಬಹುದು ಎಂಬುದಕ್ಕೆ ತುರ್ತುಸ್ಥಿತಿಯೂ ಸೇರಿದಂತೆ ಸ್ವತಂತ್ರ ಭಾರತದಲ್ಲಿ ಅನೇಕಾರು ಉದಾಹರಣೆಗಳಿವೆ. ಹತ್ತಾರು ಹತ್ಯಾಕಾಂಡಗಳು, ಕೋಮುಗಲಭೆಗಳು ಮತ್ತು ಅದರ ನಂತರದ ಬೆಳವಣಿಗೆಗಳು ಮತ್ತೆ ಮತ್ತೆ ರಾಜಕಾರಣದ ಅಪಾಯವನ್ನು ವಿವರಿಸುತ್ತಲೇ ಇದೆ. ಇಂಥ ಸಂದರ್ಭಗಳಲ್ಲೆಲ್ಲ ನಾಗರಿಕರು ಭರವಸೆಯಾಗಿ ಆಯ್ಕೆ ಮಾಡಿಕೊಳ್ಳುವುದು ಮಾಧ್ಯಮವನ್ನು. ಅದು ಸತ್ಯ ಸುದ್ದಿಯನ್ನು ಒದಗಿಸಲಿ ಎಂದು ಜನರು ಕಾಯುತ್ತಾರೆ. ಪ್ರಭುತ್ವದ ಸುಳ್ಳುಗಳನ್ನು ಬೆತ್ತಲೆ ಮಾಡಲಿ ಎಂದು ಹಾರೈಸುತ್ತಾರೆ. ಅಷ್ಟಕ್ಕೂ, ಪ್ರಭುತ್ವಕ್ಕೆ ಹೋಲಿಸಿದರೆ ಪತ್ರಕರ್ತರು ತೀರಾ ದುರ್ಬಲರು. ಅವರಿಗೆ ಕಾವಲು ಭಟರಿಲ್ಲ. ಪೆನ್ನು, ಕ್ಯಾಮರಾಗಳೇ ಅವರ ಆಯುಧ. ಪ್ರಭುತ್ವದ ಬಂದೂಕಿನ ಎದುರು ಈ ಆಯುಧಗಳು ಏನೇನೂ ಅಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೂ ಪೆನ್ನು ಮತ್ತು ಕ್ಯಾಮರಾಗಳು ಈ ದೇಶದಲ್ಲಿ ಬಂದೂಕುಗಳನ್ನು ಅನೇಕಾರು ಬಾರಿ ಮೆಟ್ಟಿ ನಿಂತಿವೆ. ಈ ಬಂದೂಕುಗಳ ಕಣ್ತಪ್ಪಿಸಿ ಪ್ರಭುತ್ವವನ್ನು ಬೆತ್ತಲೆಗೊಳಿಸುವ ಶ್ರಮ ನಡೆಸಿವೆ ಮತ್ತು ಯಶಸ್ವಿಯಾಗಿವೆ. ಆದ್ದರಿಂದಲೇ ಇವತ್ತೂ ಜನರು ರಾಜಕಾರಣಿಗಳಿಗಿಂತ ಪತ್ರಕರ್ತರನ್ನು ಹೆಚ್ಚು ನಂಬುತ್ತಾರೆ. JNU ಪ್ರಕರಣದಲ್ಲಿ BJP ಮತ್ತು ABVPಗಳು ನೀಡುತ್ತಿರುವ ಹೇಳಿಕೆಗಳು ಮತ್ತು ಉದುರಿಸುತ್ತಿರುವ ‘ದೇಶಪ್ರೇಮ’ದ ಅಣಿಮುತ್ತುಗಳನ್ನೆಲ್ಲ ಜಾಲಾಡಿ, ಒಂದೊಂದನ್ನೇ ಒಡೆದು, ಕಾಳೆಷ್ಟು-ಜೊಳ್ಳೆಷ್ಟು ಎಂದು ಪ್ರತ್ಯೇಕಿಸಿ ದೇಶವನ್ನು ಜಾಗೃತಗೊಳಿಸಿದ್ದು ಮಾಧ್ಯಮವೇ. ಮಾಧ್ಯಮ ಎಚ್ಚರಿಕೆ ಇಲ್ಲದೇ ಇರುತ್ತಿದ್ದರೆ ಇವತ್ತು ಉಮರ್ ಖಾಲಿದ್ ಪಾಕಿಸ್ತಾನಿ ಟೆರರಿಸ್ಟ್ ಆಗಿರುತ್ತಿದ್ದ. ಶೆಹ್ಲಾ ಮಾನವ ಬಾಂಬ್ ಆಗಿರುತ್ತಿದ್ದಳು. ಕನ್ಹಯ್ಯನನ್ನು ಅಫ್ಝಲ್ ಗುರುವಿನ ಸ್ಥಾನದಲ್ಲಿ ಕೂರಿಸಿ ‘ಯಾವಾಗ ಗಲ್ಲು’ ಎಂದು ರಾಜಕಾರಣಿಗಳು ಪ್ರಶ್ನಿಸುತ್ತಿದ್ದರು. ಆದರೆ BJP ಮತ್ತು ಅದರ ಬೆಂಬಲಿಗರ ಹುಸಿ ದೇಶಪ್ರೇಮ ಬಣ್ಣವನ್ನು ಮಾಧ್ಯಮದ ಒಂದು ಗುಂಪು ಪರಿಣಾಮಕಾರಿಯಾಗಿಯೇ ಬಯಲಿಗೆಳೆಯುತ್ತಿದೆ. ವಿದ್ಯಾರ್ಥಿಗಳ ಮೇಲೆ ಹೊರಿಸಲಾಗುತ್ತಿರುವ ಪ್ರತಿ ಆರೋಪಗಳನ್ನೂ ಅಧಿಕಾರಯುತವಾಗಿ ಪ್ರಶ್ನಿಸುತ್ತಿದೆ. ಈ ಬೆಳವಣಿಗೆಯನ್ನು ಖುಷಿಯಿಂದ ವೀಕ್ಷಿಸುತ್ತಿರುವ ಈ ಸಂದರ್ಭದಲ್ಲಿಯೇ ಮಾಧ್ಯಮಗಳ ಕೆಲವು ಸುದ್ದಿ ಮನೆಗಳು ಹೇಗೆ ಪ್ರಭುತ್ವದ ತುತ್ತೂರಿಗಳಾಗಿ ವರ್ತಿಸುತ್ತಿವೆ ಎಂಬುದರತ್ತ ವಿಶ್ವ ದೀಪಕ್ ಬೆಳಕು ಚೆಲ್ಲಿದ್ದಾರೆ. ಸುದ್ದಿ ಮನೆಯೊಳಗಿದ್ದು ಅಲ್ಲಿನ ಪ್ರತಿಯೊಂದು ಚಟುವಟಿಕೆಯನ್ನು ಹತ್ತಿರದಿಂದ ನೋಡುತ್ತಾ ಬೆಳೆದವರಾದ ಕಾರಣ ವಿಶ್ವದೀಪಕ್‍ರ ಮಾತನ್ನು ಮಾಧ್ಯಮ ಜಗತ್ತು ಮತ್ತು ಓದುಗ ವಲಯ ಗಂಭೀರವಾಗಿ ಸ್ವೀಕರಿಸಬೇಕಿದೆ. ನೀವು ವೀಕ್ಷಿಸುತ್ತಿರುವ ಮತ್ತು ಓದುತ್ತಿರುವ ಸುದ್ದಿಗಳು ಅಥವಾ ವೀಡಿಯೋಗಳು ಸಂಪೂರ್ಣ ಪಾರದರ್ಶಕವಾಗಿರಬೇಕಿಲ್ಲ ಎಂದವರು ಮುನ್ನೆಚ್ಚರಿಕೆ ನೀಡಿದ್ದಾರೆ. ಇದು ತೀರಾ ಕ್ಷುಲ್ಲಕವಲ್ಲ. ಮಾಧ್ಯಮ ರಂಗವು ಆಳುವವರ ‘ಹೊಗಳುಭಟ’ವಾಗಿ ಪರಿವರ್ತನೆಗೊಳ್ಳುತ್ತಿದೆ ಎಂಬುದು ಪ್ರಜಾತಂತ್ರದ ಪಾಲಿಗೆ ಅಪಾಯದ ಮುನ್ಸೂಚನೆ. ಗುಜರಾತ್ ಹತ್ಯಾಕಾಂಡದ ಸಂದರ್ಭದಲ್ಲಿ ಅಲ್ಲಿನ ಪತ್ರಿಕೆ ಮತ್ತು ಟಿ.ವಿ. ಚಾನೆಲ್‍ಗಳ ಮೇಲೆ ಇಂಥ ಆರೋಪ ಜೋರಾಗಿಯೇ ಕೇಳಿ ಬಂದಿತ್ತು. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಈ ಆರೋಪವನ್ನು ದೃಢೀಕರಿಸುವಷ್ಟು ಅಲ್ಲಿನ ಮಾಧ್ಯಮ ರಂಗದ ಕಾರ್ಯನಿರ್ವಹಣೆ ಚಿಂತಾಜನಕವಾಗಿತ್ತು.
ಪ್ರಭುತ್ವದ ಓಲೈಕೆಯಲ್ಲಿ ಸುದ್ದಿ ಮನೆಯೊಂದು ನಿರತವಾಗುತ್ತದೆಂದರೆ ಸತ್ಯದ ದಫನವಾಗಲು ಪ್ರಾರಂಭವಾಗಿದೆ ಎಂದರ್ಥ. ಈಗಾಗಲೇ ಕೆಲವು ನಿರ್ದಿಷ್ಟ ‘ಸುದ್ದಿ ಮನೆ’ಗಳು ಈ ದಫನ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿವೆ. ಅವುಗಳಿಗೆ ಈಗಿನ ಪ್ರಭುತ್ವ ಹೇಳುತ್ತಿರುವುದೆಲ್ಲ ಪರಮ ಪವಿತ್ರ ಸುದ್ದಿಗಳಾಗುತ್ತಿವೆ. ಅದಕ್ಕಾಗಿ ಅವು ಪುರಾವೆಗಳನ್ನು ಉತ್ಪಾದಿಸುತ್ತಿವೆ. ವಿಶ್ವದೀಪಕ್ ಈ ಬೆಳವಣಿಗೆಯನ್ನೇ ಪ್ರಶ್ನಿಸಿದ್ದಾರೆ. ಅವರ ಈ ಬಂಡಾಯವು ಸುದ್ದಿಮನೆಗಳನ್ನು ಸ್ವಚ್ಛಗೊಳಿಸುವಲ್ಲಿ ಅಥವಾ ದಫನ ಕಾರ್ಯದಲ್ಲಿ ನಿರತವಾಗಿರುವ ಸುದ್ದಿ ಮನೆಗಳನ್ನು ಎಚ್ಚರಗೊಳಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸೋಣ.
Thursday, 18 February 2016
ಹೆಡ್ಲಿ ವಿಚಾರಣೆ ಮತ್ತು ಕಾಡುವ ಸಂದೇಹಗಳು
ಡೇವಿಡ್ ಹೆಡ್ಲಿ ಎಂಬುದು ಅಮೇರಿಕದ ಇನ್ನೊಂದು ಹೆಸರೋ ಎಂದು ಸಂದೇಹಿಸಬೇಕಾದ ಸಂದರ್ಭ ಸೃಷ್ಟಿಯಾಗಿದೆ. 2008 ನವೆಂಬರ್ 26ರಂದು (26/11) ಮುಂಬೈಯ ಮೇಲೆ ನಡೆದ ಭಯೋತ್ಪಾದನಾ ದಾಳಿಯ ಅತಿ ಪ್ರಮುಖ ಆರೋಪಿಯಾಗಿದ್ದಾನೆ ಹೆಡ್ಲಿ. ಆತ ಸದ್ಯ ಅಮೇರಿಕದ ಜೈಲಲ್ಲಿದ್ದಾನೆ. ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಂಬೈಯ ಟಾಡಾ ಹೈಕೋರ್ಟ್‍ನ ವಿಚಾರಣೆಗೆ ಒಳಗಾಗಿದ್ದಾನೆ. ದಂಗುಬಡಿಸುವ ಸಾಕ್ಷ್ಯಗಳನ್ನು ನೀಡಿದ್ದಾನೆ. ಆ ಸಾಕ್ಷ್ಯಗಳು ಎಷ್ಟು ಪ್ರಬಲವಾಗಿವೆ ಎಂದರೆ, ಯಾರೇ ಆಗಲಿ ಪಾಕಿಸ್ತಾನದೊಂದಿಗೆ ಸಂಬಂಧ ಸ್ಥಾಪಿಸುವ ಮೊದಲು ಎರಡೆರಡು ಬಾರಿ ಆಲೋಚಿಸುವಷ್ಟು. ಮುಂಬೈ ದಾಳಿಯನ್ನು ಪ್ರಾಯೋಜಿಸಿದ್ದೇ ಪಾಕಿಸ್ತಾನ ಎಂದಾತ ಹೇಳಿದ್ದಾನೆ. ಐಎಸ್‍ಐ, ಲಖ್ವಿ, ಹಫೀಝï, ಸಾಜಿದ್ ಮೀರ್, ಲಷ್ಕರೆ ತ್ವಯ್ಯಿಬ.. ಮುಂತಾದುವುಗಳ ಜೊತೆಗೆ ತನಗಿದ್ದ ನಿಕಟ ಸಂಬಂಧ ಮತ್ತು ಇವರಿಗೂ ಪಾಕ್ ಆಡಳಿತಕ್ಕೂ ನಡುವೆ ಇದ್ದ ನಂಟನ್ನು ವಿವರಿಸಿದ್ದಾನೆ. ಹೀಗೆ, 160 ಮಂದಿಯನ್ನು ಬಲಿ ಪಡೆದ ಭಯಾನಕ ಭಯೋತ್ಪಾದನಾ ಕೃತ್ಯವೊಂದರ ಮೂಲವು ಪಾಕಿಸ್ತಾನದಲ್ಲಿದೆ ಎಂದು ಅಮೇರಿಕನ್ ಜೈಲಲ್ಲಿರುವ ಅಮೇರಿಕನ್ ಪ್ರಜೆಯೊಬ್ಬ ಸಾಕ್ಷ್ಯ ನುಡಿದ ಬೆನ್ನಿಗೇ ಅಮೇರಿಕವು ಪರಮಾಣು ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಯಂತ್ರಗಳೂ ಸೇರಿದಂತೆ 700 ಮಿಲಿಯನ್ ಡಾಲರ್ ಮೌಲ್ಯದ ಯುದ್ಧೋಪಕರಣಗಳನ್ನು ಪಾಕಿಸ್ತಾನಕ್ಕೆ ಮಾರಾಟ ಮಾಡಲು ಸಿದ್ಧವಾಗಿದೆ. ಇದರಲ್ಲಿ ಎಫ್-16 ಮಾದರಿಯ ಯುದ್ಧ ವಿಮಾನಗಳೂ ಸೇರಿವೆ. ಏನಿದರ ಅರ್ಥ? ಉತ್ತರ ಕೊರಿಯಾ, ಇರಾನ್, ಕ್ಯೂಬಾ, ವೆನೆಝುವೇಲಾಗಳು ಒಂದಲ್ಲ ಒಂದು ರೀತಿಯಲ್ಲಿ ಅಮೇರಿಕದ ದಿಗ್ಬಂಧನಗಳಿಗೆ ಒಳಗಾಗುತ್ತಿರುವ ಈ ದಿನಗಳಲ್ಲಿ ಪಾಕಿಸ್ತಾನವು ಪುರಸ್ಕಾರಕ್ಕೆ ಒಳಗಾಗುವುದು ಯಾವುದರ ಕಾರಣದಿಂದ? ಭಾರತದ ವಿದೇಶಾಂಗ ನೀತಿಯ ವೈಫಲ್ಯಕ್ಕೆ ಇದರಲ್ಲಿ ಎಷ್ಟಂಶ ಪಾಲಿದೆ? ಕಾಂಗ್ರೆಸ್ ಸರಕಾರದ ಮೃದು ನೀತಿಯಿಂದಾಗಿ ಪಾಕ್ ಕೊಬ್ಬಿದೆ ಎಂದು ಹೇಳುತ್ತಿದ್ದ ಬಿಜೆಪಿಯು ಇದೀಗ ಅಧಿಕಾರದಲ್ಲಿದ್ದೂ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಕ್ಕೆ ಭೇಟಿ ಕೊಟ್ಟೂ ಅಮೇರಿಕದ ಈ ಧೋರಣೆಗೆ ಕಾರಣಗಳೇನು? ಬಿಜೆಪಿ ಕೂಡ ಅದೇ ಕಾಂಗ್ರೆಸ್‍ನ ವಿದೇಶಾಂಗ ನೀತಿಯನ್ನೇ ಅನುಸರಿಸುತ್ತಿದೆಯೇ ಅಥವಾ ಕಾಂಗ್ರೆಸ್‍ನ ವಿದೇಶಾಂಗ ನೀತಿಯಷ್ಟೂ ಪ್ರಭಾವ ಬೀರಲು ಬಿಜೆಪಿ ವಿಫಲವಾಗಿದೆಯೇ? ನರೇಂದ್ರ ಮೋದಿಯವರ ವಿದೇಶ ಪ್ರವಾಸವು ಒಂದು ‘ಜಾಲಿ ಟ್ರಿಪ್’ ಆಗುವುದಕ್ಕಷ್ಟೇ ಸೀಮಿತವಾಗಿದೆಯೇ? ಅಮೇರಿಕವೇಕೆ ಹೆಡ್ಲಿಯ ಸಾಕ್ಷ್ಯಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ? ಭಾರತೀಯ ಮುಖ್ಯಧಾರೆಯ ಪತ್ರಿಕೆಗಳಲ್ಲಿ ಸುಮಾರು ಒಂದು ವಾರಗಳ ತನಕ ಹೆಡ್ಲಿಯ ಸಾಕ್ಷ್ಯಗಳು ಮುಖಪುಟದಲ್ಲಿ ಪ್ರಧಾನ ಸುದ್ದಿಯಾಗಿ ಪ್ರಕಟವಾಗಿವೆ. ಆಂಗ್ಲಭಾಷೆಯ ಟಿ.ವಿ. ಮಾಧ್ಯಮಗಳು ಪ್ರೈಮ್ ಟೈಮ್‍ನಲ್ಲಿ ಈ ಸಾಕ್ಷ್ಯಗಳನ್ನೆತ್ತಿಕೊಂಡು ಒಂದಕ್ಕಿಂತ ಹೆಚ್ಚು ಬಾರಿ ಚರ್ಚಿಸಿವೆ. ಇವೆಲ್ಲ ಭಾರತದಲ್ಲಿರುವ ಅಮೇರಿಕನ್ ರಾಜತಾಂತ್ರಿಕರಿಗೆ ಮತ್ತು ಅವರ ಮೂಲಕ ಅಮೇರಿಕನ್ ಆಡಳಿತಕ್ಕೆ ತಲುಪದಿರುವುದಕ್ಕೆ ಸಾಧ್ಯವೇ ಇಲ್ಲ. ‘ಅಮೇರಿಕದ ಔಷಧ ಜಾರಿ ಸಂಸ್ಥೆಯ ಅಧಿಕಾರಿ’ ಎಂಬ ಮುಖವಾಡದಲ್ಲಿ ಹೆಡ್ಲಿಯು ಭಾರತಕ್ಕೆ ಏಳೆಂಟು ಬಾರಿ ಬಂದಿದ್ದ. ಆದರೆ ಹಾಗೆ ಬಂದ ಆತ ಮುಂಬೈ ದಾಳಿಗೆ ಬೇಕಾದ ತಯಾರಿಗಳನ್ನು ನಡೆಸಿದ್ದ. ಮಾಹಿತಿಗಳನ್ನು ಸಂಗ್ರಹಿಸಿದ್ದ. ನಕಾಶೆಗಳನ್ನು ತಯಾರಿಸಿದ್ದ. ಅಲ್ಲದೇ ಮುಂಬೈ ದಾಳಿಯ ಬಳಿಕವೂ ಆತ ಭಾರತಕ್ಕೆ ಭೇಟಿ ಕೊಟ್ಟಿದ್ದಾನೆ. ಇವೆಲ್ಲವೂ ಇದೀಗ ವಿಚಾರಣೆಯ ವೇಳೆ ಬಹಿರಂಗವಾಗಿದೆ. ಹಾಗಂತ, ಅಮೇರಿಕಕ್ಕೆ ಇವೆಲ್ಲವೂ ಗೊತ್ತಿರಲಿಲ್ಲವೇ? ತನ್ನ ಪ್ರಜೆಯೊಬ್ಬ ‘Drug Enforcement Administration Informer’ ಆಗಿ ಭಾರತಕ್ಕೆ ಪದೇ ಪದೇ ತೆರಳಿ ಏನೇನು ಮಾಡುತ್ತಿದ್ದಾನೆ ಎಂಬುದನ್ನು ತಿಳಿಯಲಾರದಷ್ಟು ಅಮೇರಿಕ ದುರ್ಬಲವಾಗಿತ್ತೇ? ಲಾಡೆನ್, ಅವ್ಲಾಕಿ, ಸದ್ದಾಮ್ ಹುಸೇನ್‍ರನ್ನು ಪತ್ತೆ ಹಚ್ಚುವಷ್ಟು ಅಥವಾ ಇರಾನಿನ ಅತಿ ರಹಸ್ಯ ಅಣುಸ್ಥಾವರಗಳಲ್ಲಿ ಏನೇನು ನಡೆಯುತ್ತಿವೆ ಮತ್ತು ಎಷ್ಟು ಪ್ರಮಾಣದಲ್ಲಿ ಯುರೇನಿಯಂ ಸಂವರ್ಧನೆಯ ಕಾರ್ಯ ನಡೆದಿದೆ ಎಂದೆಲ್ಲಾ ತಿಳಿದುಕೊಳ್ಳುವಷ್ಟು ಸಮರ್ಥವಾಗಿರುವ ರಾಷ್ಟ್ರವೊಂದಕ್ಕೆ ಹೆಡ್ಲಿ ಪದೇ ಪದೇ ಭಾರತ ಮತ್ತು ಪಾಕಿಸ್ತಾನಕ್ಕೆ ಯಾಕೆ ಹೋಗುತ್ತಿದ್ದಾನೆ ಎಂಬುದನ್ನು ಪತ್ತೆ ಹಚ್ಚುವುದು ಕಷ್ಟವೇ? ಅಮೇರಿಕದ ಬಗ್ಗೆ ಹೀಗೆ ಹೇಳುವುದು ಇವತ್ತಿನ ದಿನಗಳಲ್ಲಿ ಹಾಸ್ಯಾಸ್ಪದವಾದೀತು. ಒಂದೋ ಅಮೇರಿಕ ಈ ಎಲ್ಲವನ್ನೂ ಹೆಡ್ಲಿಯಿಂದ ಗೊತ್ತಿದ್ದೇ ಮಾಡಿಸಿದೆ ಅಥವಾ ವೀಡಿಯೋ ಕಾನ್ಫರೆನ್ಸ್ ನ ಮೂಲಕ ಇದೀಗ ವೈಭವೀಕೃತ ಸುಳ್ಳುಗಳನ್ನು ಹಂಚಲಾಗುತ್ತಿದೆ.
ನಿಜವಾಗಿ, ಪಾಕಿಸ್ತಾನ ಎಂಬುದು ಭಾರತೀಯರಿಗೆ ಒಂದು ರಾಷ್ಟ್ರದ ಹೆಸರಾಗಿಯಷ್ಟೇ ಉಳಿದುಕೊಂಡಿಲ್ಲ ಎಂಬುದು ಅಮೇರಿಕಕ್ಕೆ ಚೆನ್ನಾಗಿ ಗೊತ್ತು. ಭಾರತೀಯ ಚುನಾವಣಾ ಕ್ಷೇತ್ರದ ಫಲಿತಾಂಶವನ್ನು ನಿರ್ಣಯಿಸುವ ಸಾಮರ್ಥ್ಯ ಪಾಕಿಸ್ತಾನ ಎಂಬ ಹೆಸರಿಗಿದೆ. ನರೇಂದ್ರ ಮೋದಿಯವರಂತೂ ‘ಪಾಕಿಸ್ತಾನ್’ನಿಂದ ಧಾರಾಳ ಫಸಲನ್ನು ಕೊಯ್ದಿದ್ದಾರೆ. ‘ಮಿಯಾಂ ಮುಷರ್ರಫ್’ ಎಂಬ ಪದಪುಂಜವನ್ನು ಅವರು ಉತ್ಪಾದಿಸಿದ್ದಾರೆ. ಗಡಿಯಲ್ಲಿ ಯೋಧರೋರ್ವರ ತಲೆ ಉರುಳಿಸಲಾದ ಘಟನೆಯನ್ನು ಮೋದಿಯವರ ಪಕ್ಷ ರಾಜಕೀಯ ಲಾಭಕ್ಕೆ ಎತ್ತಿಕೊಂಡಿತ್ತು. ಮುಂಬೈ ದಾಳಿಗೆ ಅತ್ಯಂತ ಪ್ರಚೋದನಾತ್ಮಕ ಶೈಲಿಯಲ್ಲಿ ಅದು ಪ್ರತಿಕ್ರಿಯಿಸಿತ್ತು. ಕಾಂಗ್ರೆಸ್ ಸರಕಾರವನ್ನು ‘ಷಂಡ’ ಎಂದು ಜರೆಯಲು ಆ ಘಟನೆಯನ್ನು ಅದು ಬಳಸಿಕೊಂಡಿತ್ತು. ಇಂಥ ಪಕ್ಷವೇ ಅಧಿಕಾರಕ್ಕೇರುವುದೆಂದರೆ ಒಂದು ರೀತಿಯಲ್ಲಿ ಕೆಂಡದ ಮೇಲೆ ಕಾಲಿಟ್ಟಂತೆ. ನಿರೀಕ್ಷೆಗಳ ಭಾರವೊಂದು ಆ ಸರಕಾರದ ಮೇಲಿರುತ್ತದೆ. ಈ ಕಾರಣದಿಂದಲೇ ಈಗಿನ ಬೆಳವಣಿಗೆಗಳ ಬಗ್ಗೆ ಅನುಮಾನ ಪಡಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೇರಿಕನ್ ಆಡಳಿತದ ಮಧ್ಯೆ ಸಹಕಾರದ ಮಾತುಕತೆಗಳೇನಾದರೂ ನಡೆದಿರಬಹುದೇ? ಮುಂಬೈ ದಾಳಿಯಲ್ಲಿ ಪಾಕ್ ಕೈವಾಡದ ಕುರಿತು ಅಮೇರಿಕದಲ್ಲಿದ್ದುಕೊಂಡೇ ಹೆಡ್ಲಿಯಿಂದ ಸಾಕ್ಷ್ಯಗಳನ್ನು ಹೇಳಿಸುವುದು ಮತ್ತು ಅದಕ್ಕೆ ಬದಲಾಗಿ ಭಾರತವು ಹೆಡ್ಲಿಗೆ ಕ್ಷಮಾದಾನ ನೀಡಿ ಆತನ ಗಡೀಪಾರಿಗೆ ಒತ್ತಾಯಿಸದಿರುವುದೂ ಈ ತಿಳುವಳಿಕೆಯಲ್ಲಿ ಸೇರಿರಬಹುದೇ? ಯಾಕೆಂದರೆ, ಹೀಗೆ ಮಾಡುವುದರಿಂದ ಅಮೇರಿಕಕ್ಕೆ ಎರಡು ರೀತಿಯ ಲಾಭಗಳಿವೆ ಮತ್ತು ನರೇಂದ್ರ ಮೋದಿಯವರಿಗೆ ಒಂದು ಲಾಭವಿದೆ. ಮೋದಿಯವರ ಲಾಭ ಏನೆಂದರೆ, ಅಮೇರಿಕದಲ್ಲಿರುವ ಮುಂಬೈ ದಾಳಿಯ ಆರೋಪಿಯನ್ನೇ ವಿಚಾರಣೆಗೊಳಪಡಿಸಿದ ಚಾಣಾಕ್ಷ ಎಂಬ ಇಮೇಜ್ ಅನ್ನು ಬೆಳೆಸಿಕೊಳ್ಳಬಹುದು. ಪಾಕಿಸ್ತಾನದ ವಿರುದ್ಧ ಭಾರತದಲ್ಲಿ ಮತ್ತೊಮ್ಮೆ ಭಾವನಾತ್ಮಕ ವಾತಾವರಣವನ್ನು ಉಂಟು ಮಾಡಬಹುದು. ಹಫೀಝï ಸಈದ್, ಲಕ್ವಿ, ಹಾಮಿದ್ ಮೀರ್ ಸಹಿತ ಎಲ್ಲ ಆರೋಪಿಗಳನ್ನೂ ಭಾರತಕ್ಕೆ ಹಸ್ತಾಂತರಿಸಿ ಎಂದು ಪಾಕ್‍ಗೆ ಕರೆ ಕೊಡುತ್ತಾ ಭಾರತೀಯರ ‘ದೇಶಪ್ರೇಮ’ವನ್ನು ಬಡಿದೆಬ್ಬಿಸಬಹುದು. ಹಾಗಂತ, ಅಮೇರಿಕ ಬಯಸುವುದೂ ಇದೇ ವಾತಾವರಣವನ್ನು. ಹೆಡ್ಲಿಯಿಂದ ಸಾಕ್ಷ್ಯ ನುಡಿಸಿದರೆ ಒಂದು ಕಡೆ ಭಾರತದಲ್ಲಿ ಪಾಕ್ ವಿರೋಧಿ ಆವೇಶಗಳು ಕಾಣಿಸಿಕೊಳ್ಳುವಾಗ ಇನ್ನೊಂದು ಕಡೆ ಪಾಕ್‍ನ ಮೇಲೆಯೂ ಇದು ಒತ್ತಡವನ್ನು ಹೇರುತ್ತದೆ. ಭಾರತ ಎಲ್ಲಾದರೂ ಕಾಲು ಕೆರೆದು ಜಗಳಕ್ಕಿಳಿದರೆ ಎಂಬ ಅನುಮಾನವನ್ನು ಹುಟ್ಟಿಸುತ್ತದೆ. ಮೊದಲೇ ನರೇಂದ್ರ ಮೋದಿಯವರು ಪಾಕ್ ವಿರೋಧಿಯಾಗಿ ಗುರುತಿಸಿಕೊಂಡವರು. ಈ ಸಾಕ್ಷ್ಯದ ಕಾರಣದಿಂದಾಗಿ ಅವರು, ಅವರ ಪಕ್ಷ ಮತ್ತು ಮಾಧ್ಯಮಗಳು ಕೂಡ ಪಾಕ್‍ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಬಹುದು. ಅಂಥ ಸಂದರ್ಭದಲ್ಲಿ ಪಾಕ್ ಸ್ವರಕ್ಷಣೆಯ ಬಗ್ಗೆ ಹೆಚ್ಚೆಚ್ಚು ಚಿಂತಿಸಬಹುದು. ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿ ಅಮೇರಿಕದೊಂದಿಗೆ ಈ ಹಿಂದೆ ನಡೆಸಲಾದ ಒಪ್ಪಂದಗಳನ್ನು ಕಾರ್ಯರೂಪಕ್ಕೆ ತರಲು ಅಥವಾ ತುರ್ತಾಗಿ ಶಸ್ತ್ರಾಸ್ತ್ರಗಳನ್ನು ತರಿಸಿಕೊಳ್ಳುವ ಒಡಂಬಡಿಕೆಯನ್ನು ಮಾಡಿಕೊಳ್ಳಲು ಅದು ಮುಂದಾಗಬಹುದು. ಬಹುಶಃ ಹೆಡ್ಲಿಯ ಸಾಕ್ಷ್ಯ ಮತ್ತು ಅದರ ಬೆನ್ನಿಗೇ ಪಾಕಿಸ್ತಾನಕ್ಕೆ ಅಮೇರಿಕದಿಂದ ಯುದ್ಧೋಪಕರಣಗಳ ಮಾರಾಟದ ಹಿಂದೆ ಇಂಥದ್ದೊಂದು ತಂತ್ರ ಇದ್ದಿರಬಹುದೇ? ಹೆಡ್ಲಿಯನ್ನು ಮುಂದಿಟ್ಟು ಭಾರತ ಮತ್ತು ಪಾಕ್‍ಗಳೆರಡನ್ನೂ ಪ್ರಚೋದಿಸಿ ಪಾಕ್‍ಗೆ ಯುದ್ಧಾಸ್ತ್ರಗಳನ್ನು ಮಾರುವ ಹಾಗೂ ಭಾರತದಲ್ಲಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಧಕ್ಕೆಯಾಗದಂತೆ ಕಾಪಾಡುವ ಹುನ್ನಾರ ಇದರ ಹಿಂದಿರಬಹುದೇ? ಅಮೇರಿಕದ ನರಿಬುದ್ಧಿಯ ಪರಿಚಯ ಇರುವ ಯಾರೂ ಇಂಥದ್ದೊಂದು ಸಾಧ್ಯತೆಯನ್ನು ತಿರಸ್ಕರಿಸಲಾರರು.
ನಿಜವಾಗಿ, ಪಾಕಿಸ್ತಾನ ಎಂಬುದು ಭಾರತೀಯರಿಗೆ ಒಂದು ರಾಷ್ಟ್ರದ ಹೆಸರಾಗಿಯಷ್ಟೇ ಉಳಿದುಕೊಂಡಿಲ್ಲ ಎಂಬುದು ಅಮೇರಿಕಕ್ಕೆ ಚೆನ್ನಾಗಿ ಗೊತ್ತು. ಭಾರತೀಯ ಚುನಾವಣಾ ಕ್ಷೇತ್ರದ ಫಲಿತಾಂಶವನ್ನು ನಿರ್ಣಯಿಸುವ ಸಾಮರ್ಥ್ಯ ಪಾಕಿಸ್ತಾನ ಎಂಬ ಹೆಸರಿಗಿದೆ. ನರೇಂದ್ರ ಮೋದಿಯವರಂತೂ ‘ಪಾಕಿಸ್ತಾನ್’ನಿಂದ ಧಾರಾಳ ಫಸಲನ್ನು ಕೊಯ್ದಿದ್ದಾರೆ. ‘ಮಿಯಾಂ ಮುಷರ್ರಫ್’ ಎಂಬ ಪದಪುಂಜವನ್ನು ಅವರು ಉತ್ಪಾದಿಸಿದ್ದಾರೆ. ಗಡಿಯಲ್ಲಿ ಯೋಧರೋರ್ವರ ತಲೆ ಉರುಳಿಸಲಾದ ಘಟನೆಯನ್ನು ಮೋದಿಯವರ ಪಕ್ಷ ರಾಜಕೀಯ ಲಾಭಕ್ಕೆ ಎತ್ತಿಕೊಂಡಿತ್ತು. ಮುಂಬೈ ದಾಳಿಗೆ ಅತ್ಯಂತ ಪ್ರಚೋದನಾತ್ಮಕ ಶೈಲಿಯಲ್ಲಿ ಅದು ಪ್ರತಿಕ್ರಿಯಿಸಿತ್ತು. ಕಾಂಗ್ರೆಸ್ ಸರಕಾರವನ್ನು ‘ಷಂಡ’ ಎಂದು ಜರೆಯಲು ಆ ಘಟನೆಯನ್ನು ಅದು ಬಳಸಿಕೊಂಡಿತ್ತು. ಇಂಥ ಪಕ್ಷವೇ ಅಧಿಕಾರಕ್ಕೇರುವುದೆಂದರೆ ಒಂದು ರೀತಿಯಲ್ಲಿ ಕೆಂಡದ ಮೇಲೆ ಕಾಲಿಟ್ಟಂತೆ. ನಿರೀಕ್ಷೆಗಳ ಭಾರವೊಂದು ಆ ಸರಕಾರದ ಮೇಲಿರುತ್ತದೆ. ಈ ಕಾರಣದಿಂದಲೇ ಈಗಿನ ಬೆಳವಣಿಗೆಗಳ ಬಗ್ಗೆ ಅನುಮಾನ ಪಡಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೇರಿಕನ್ ಆಡಳಿತದ ಮಧ್ಯೆ ಸಹಕಾರದ ಮಾತುಕತೆಗಳೇನಾದರೂ ನಡೆದಿರಬಹುದೇ? ಮುಂಬೈ ದಾಳಿಯಲ್ಲಿ ಪಾಕ್ ಕೈವಾಡದ ಕುರಿತು ಅಮೇರಿಕದಲ್ಲಿದ್ದುಕೊಂಡೇ ಹೆಡ್ಲಿಯಿಂದ ಸಾಕ್ಷ್ಯಗಳನ್ನು ಹೇಳಿಸುವುದು ಮತ್ತು ಅದಕ್ಕೆ ಬದಲಾಗಿ ಭಾರತವು ಹೆಡ್ಲಿಗೆ ಕ್ಷಮಾದಾನ ನೀಡಿ ಆತನ ಗಡೀಪಾರಿಗೆ ಒತ್ತಾಯಿಸದಿರುವುದೂ ಈ ತಿಳುವಳಿಕೆಯಲ್ಲಿ ಸೇರಿರಬಹುದೇ? ಯಾಕೆಂದರೆ, ಹೀಗೆ ಮಾಡುವುದರಿಂದ ಅಮೇರಿಕಕ್ಕೆ ಎರಡು ರೀತಿಯ ಲಾಭಗಳಿವೆ ಮತ್ತು ನರೇಂದ್ರ ಮೋದಿಯವರಿಗೆ ಒಂದು ಲಾಭವಿದೆ. ಮೋದಿಯವರ ಲಾಭ ಏನೆಂದರೆ, ಅಮೇರಿಕದಲ್ಲಿರುವ ಮುಂಬೈ ದಾಳಿಯ ಆರೋಪಿಯನ್ನೇ ವಿಚಾರಣೆಗೊಳಪಡಿಸಿದ ಚಾಣಾಕ್ಷ ಎಂಬ ಇಮೇಜ್ ಅನ್ನು ಬೆಳೆಸಿಕೊಳ್ಳಬಹುದು. ಪಾಕಿಸ್ತಾನದ ವಿರುದ್ಧ ಭಾರತದಲ್ಲಿ ಮತ್ತೊಮ್ಮೆ ಭಾವನಾತ್ಮಕ ವಾತಾವರಣವನ್ನು ಉಂಟು ಮಾಡಬಹುದು. ಹಫೀಝï ಸಈದ್, ಲಕ್ವಿ, ಹಾಮಿದ್ ಮೀರ್ ಸಹಿತ ಎಲ್ಲ ಆರೋಪಿಗಳನ್ನೂ ಭಾರತಕ್ಕೆ ಹಸ್ತಾಂತರಿಸಿ ಎಂದು ಪಾಕ್‍ಗೆ ಕರೆ ಕೊಡುತ್ತಾ ಭಾರತೀಯರ ‘ದೇಶಪ್ರೇಮ’ವನ್ನು ಬಡಿದೆಬ್ಬಿಸಬಹುದು. ಹಾಗಂತ, ಅಮೇರಿಕ ಬಯಸುವುದೂ ಇದೇ ವಾತಾವರಣವನ್ನು. ಹೆಡ್ಲಿಯಿಂದ ಸಾಕ್ಷ್ಯ ನುಡಿಸಿದರೆ ಒಂದು ಕಡೆ ಭಾರತದಲ್ಲಿ ಪಾಕ್ ವಿರೋಧಿ ಆವೇಶಗಳು ಕಾಣಿಸಿಕೊಳ್ಳುವಾಗ ಇನ್ನೊಂದು ಕಡೆ ಪಾಕ್‍ನ ಮೇಲೆಯೂ ಇದು ಒತ್ತಡವನ್ನು ಹೇರುತ್ತದೆ. ಭಾರತ ಎಲ್ಲಾದರೂ ಕಾಲು ಕೆರೆದು ಜಗಳಕ್ಕಿಳಿದರೆ ಎಂಬ ಅನುಮಾನವನ್ನು ಹುಟ್ಟಿಸುತ್ತದೆ. ಮೊದಲೇ ನರೇಂದ್ರ ಮೋದಿಯವರು ಪಾಕ್ ವಿರೋಧಿಯಾಗಿ ಗುರುತಿಸಿಕೊಂಡವರು. ಈ ಸಾಕ್ಷ್ಯದ ಕಾರಣದಿಂದಾಗಿ ಅವರು, ಅವರ ಪಕ್ಷ ಮತ್ತು ಮಾಧ್ಯಮಗಳು ಕೂಡ ಪಾಕ್‍ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಬಹುದು. ಅಂಥ ಸಂದರ್ಭದಲ್ಲಿ ಪಾಕ್ ಸ್ವರಕ್ಷಣೆಯ ಬಗ್ಗೆ ಹೆಚ್ಚೆಚ್ಚು ಚಿಂತಿಸಬಹುದು. ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿ ಅಮೇರಿಕದೊಂದಿಗೆ ಈ ಹಿಂದೆ ನಡೆಸಲಾದ ಒಪ್ಪಂದಗಳನ್ನು ಕಾರ್ಯರೂಪಕ್ಕೆ ತರಲು ಅಥವಾ ತುರ್ತಾಗಿ ಶಸ್ತ್ರಾಸ್ತ್ರಗಳನ್ನು ತರಿಸಿಕೊಳ್ಳುವ ಒಡಂಬಡಿಕೆಯನ್ನು ಮಾಡಿಕೊಳ್ಳಲು ಅದು ಮುಂದಾಗಬಹುದು. ಬಹುಶಃ ಹೆಡ್ಲಿಯ ಸಾಕ್ಷ್ಯ ಮತ್ತು ಅದರ ಬೆನ್ನಿಗೇ ಪಾಕಿಸ್ತಾನಕ್ಕೆ ಅಮೇರಿಕದಿಂದ ಯುದ್ಧೋಪಕರಣಗಳ ಮಾರಾಟದ ಹಿಂದೆ ಇಂಥದ್ದೊಂದು ತಂತ್ರ ಇದ್ದಿರಬಹುದೇ? ಹೆಡ್ಲಿಯನ್ನು ಮುಂದಿಟ್ಟು ಭಾರತ ಮತ್ತು ಪಾಕ್‍ಗಳೆರಡನ್ನೂ ಪ್ರಚೋದಿಸಿ ಪಾಕ್‍ಗೆ ಯುದ್ಧಾಸ್ತ್ರಗಳನ್ನು ಮಾರುವ ಹಾಗೂ ಭಾರತದಲ್ಲಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಧಕ್ಕೆಯಾಗದಂತೆ ಕಾಪಾಡುವ ಹುನ್ನಾರ ಇದರ ಹಿಂದಿರಬಹುದೇ? ಅಮೇರಿಕದ ನರಿಬುದ್ಧಿಯ ಪರಿಚಯ ಇರುವ ಯಾರೂ ಇಂಥದ್ದೊಂದು ಸಾಧ್ಯತೆಯನ್ನು ತಿರಸ್ಕರಿಸಲಾರರು.
Thursday, 11 February 2016
ಧರಣಿ ಮಂಡಲದಲ್ಲಿ ತಬ್ಬಲಿಯಾದ ಪುಣ್ಯಕೋಟಿಯ ಕತೆ
ಗೋಮಾಂಸ ನಿಷೇಧವು ಎಷ್ಟಂಶ ಪ್ರಾಯೋಗಿಕ ಮತ್ತು ವ್ಯಾವಹಾರಿಕ ಎಂಬ ಚರ್ಚೆ ಇಂದು ನಿನ್ನೆಯದಲ್ಲ. ಗೋಮಾಂಸ ನಿಷೇಧಕ್ಕೆ ಈ ದೇಶದಲ್ಲಿ ಒಂದು ಗುಂಪು ಒತ್ತಾಯಿಸುವಾಗ ಇನ್ನೊಂದು ಗುಂಪು, ಅದನ್ನು ಆಹಾರವಾಗಿ ಸಮರ್ಥಿಸುತ್ತಲೂ ಇದೆ. ಅಲ್ಲದೇ, ಇಡೀ ಚರ್ಚೆಯನ್ನು ಹಿಂದೂ-ಮುಸ್ಲಿಮ್ ಆಗಿ ಪರಿವರ್ತಿಸುವ ಶ್ರಮಗಳು ನಡೆಯುತ್ತಲೂ ಇವೆ. ಇಂಥ ಹೊತ್ತಿನಲ್ಲಿ ಹರ್ಯಾಣದ ಬಿಜೆಪಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಈ ಚರ್ಚೆಗೆ ಹೊಸತೊಂದು ತಿರುವನ್ನು ಕೊಟ್ಟಿದ್ದಾರೆ. ಗೋಮಾಂಸ ಸೇವನೆಯ ನಿಷೇಧದಿಂದ ವಿದೇಶಿಯರನ್ನು ಹೊರಗಿಡುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ. ಹರ್ಯಾಣದಲ್ಲಿರುವ ವಿದೇಶಿಯರು ಗೋಮಾಂಸ ಸೇವಿಸಬಹುದು ಮತ್ತು ಅದಕ್ಕಾಗಿ ಅವರಿಗೆ ವಿಶೇಷ ಪರವಾನಿಗೆ ನೀಡಲಾಗುವುದು ಎಂದವರು ಹೇಳಿದ್ದಾರೆ. ತಿನ್ನುವ ಮತ್ತು ಕುಡಿಯುವ ವಿಷಯದಲ್ಲಿ ಪ್ರತಿಯೊಬ್ಬರಿಗೂ ವೈಯಕ್ತಿಕವಾದ ಜೀವನ ಕ್ರಮವಿದ್ದು, ಅದನ್ನು ವಿರೋಧಿಸಬೇಕಿಲ್ಲ ಎಂದೂ ಅವರು ವಾದಿಸಿದ್ದಾರೆ. ಇದಕ್ಕೆ ಸಮರ್ಥನೆಯಾಗಿ, ಗುಜರಾತ್‍ನಲ್ಲಿ ಮದ್ಯಪಾನಕ್ಕೆ ನಿಷೇಧ ಇದ್ದರೂ ವಿದೇಶಿಯರಿಗೆ ವಿಶೇಷ ಪರವಾನಿಗೆ ನೀಡಿರುವುದನ್ನು ದಿ ಹಿಂದೂ ಪತ್ರಿಕೆಗೆ (2016 ಫೆಬ್ರವರಿ 7 - ಪುಟ: 15) ನೀಡಿರುವ ಸಂದರ್ಶನದಲ್ಲಿ ಅವರು ಉಲ್ಲೇಖಿಸಿದ್ದಾರೆ. ನಿಜವಾಗಿ, 2015ರ ಕೊನೆಯಲ್ಲಿ ಅವರೇ ಜಾರಿಗೆ ತಂದಿರುವ ‘ಹರ್ಯಾಣ ಗೋರಕ್ಷಣೆ ಮತ್ತು ಗೋ ಅಭಿವೃದ್ಧಿ ಕಾಯ್ದೆ’ಯ ಸ್ಪಷ್ಟ ಅಣಕ ಇದು. ಈ ಕಾಯ್ದೆಯ ಪ್ರಕಾರ, ಗೋವುಗಳ ಸಾಗಾಟ, ಗೋಹತ್ಯೆ, ಗೋಮಾಂಸ ಸೇವನೆ ಮತ್ತು ಗೋಮಾಂಸ ರಫ್ತು ಮುಂತಾದುವುಗಳಲ್ಲಿ ಭಾಗಿಯಾದವರಿಗೆ 3 ರಿಂದ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಅಂದಹಾಗೆ, ಈ ಕಾಯ್ದೆಯನ್ನು ಜಾರಿಗೊಳಿಸುವುದರ ಹಿಂದಿನ ಉದ್ದೇಶ ಏನಾಗಿತ್ತು? ಮನೋಹರಲಾಲ್ ಖಟ್ಟರ್ ಅವರು ಈ ನಿಷೇಧ ಕಾಯ್ದೆಗೆ ಏನೆಲ್ಲ ಕಾರಣಗಳನ್ನು ಕೊಟ್ಟಿದ್ದರು? ಗೋವು ಮಾತೆ, ಪೂಜನೀಯ, ಮುಕ್ಕೋಟಿ ದೇವತೆಗಳ ಆವಾಸ ಸ್ಥಾನ ಎಂಬುದು ಆ ಕಾರಣಗಳಲ್ಲಿ ಸೇರಿತ್ತಲ್ಲವೇ? ಹಾಲು ಕೊಡುವ ಮತ್ತು ಸೆಗಣಿ-ಮೂತ್ರ ಸಹಿತ ಸರ್ವೋಪಯೋಗಿಯಾದ ಗೋವಿನ ರಕ್ತ ಹರಿಸುವುದು ಭಾರತ ಮಾತೆಗೆ ಮಾಡುವ ಕಳಂಕ ಎಂದು ಅವರ ಬೆಂಬಲಿಗರು ಈ ಕಾಯ್ದೆಯನ್ನು ಸಮರ್ಥಿಸಿಕೊಂಡಿರಲಿಲ್ಲವೇ? ಗೋಮಾಂಸ ಸೇವನೆಯು ಭಯೋತ್ಪಾದನೆಗೆ ಕಾರಣವಾಗುತ್ತದೆ ಎಂದವರೂ ಇದ್ದರಲ್ಲವೇ? ನಿಜವಾಗಿ, ಗೋವನ್ನು ರಾಜಕೀಯ ಪ್ರಾಣಿಯಾಗಿ ಪರಿಚಯಿಸಿದ್ದು ಬಿಜೆಪಿಯೇ. ಗೋವನ್ನು ಮುಂದಿಟ್ಟುಕೊಂಡು ನಡೆಸಲಾದ ಪ್ರತಿಭಟನೆ, ಹಲ್ಲೆ, ಕೊಲೆ, ಗಲಭೆಗಳಲ್ಲಿ ಸ್ಥಳೀಯ ಬಿಜೆಪಿ ನಾಯಕರಿಂದ ಹಿಡಿದು ರಾಷ್ಟ್ರಮಟ್ಟದ ನಾಯಕರ ವರೆಗೆ ಅನೇಕರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾಗಿದ್ದಾರೆ. ದಾದ್ರಿ ಘಟನೆಯು ಇದಕ್ಕೆ ಇತ್ತೀಚಿನ ಉದಾಹರಣೆ ಮಾತ್ರ. ಹಾಜಬ್ಬ-ಹಸನಬ್ಬ ಪ್ರಕರಣವಂತೂ ನಮ್ಮ ನಡುವೆಯೇ ನಡೆದಿರುವಂಥದ್ದು. ಹೀಗಿರುತ್ತಾ, ಹರ್ಯಾಣದಲ್ಲಿರುವ ವಿದೇಶಿಯರು ಗೋಮಾಂಸ ಸೇವಿಸಬಹುದು ಅಂದರೆ ಏನರ್ಥ? ಇದು ಗೋಮಾತೆಗೆ ಮಾಡುವ ಅವಮಾನ, ಮೋಸವಲ್ಲವೇ? ವಿದೇಶಿಯರು ಗೋಮಾಂಸ ಸೇವಿಸುವಾಗ ಭಾರತೀಯರು ಅದರಲ್ಲೂ ಹರ್ಯಾಣಿಗರ ಭಾವನೆಗೆ ಧಕ್ಕೆಯಾಗುವುದಿಲ್ಲವೇ? ಅಲ್ಲದೇ, ತಿನ್ನುವ ಮತ್ತು ಕುಡಿಯುವ ವಿಷಯದಲ್ಲಿ ವೈಯಕ್ತಿಕ ಶೈಲಿ ಇರುವುದು ವಿದೇಶಿಯರಿಗೆ ಮಾತ್ರ ಅಲ್ಲವಲ್ಲ. ಹರ್ಯಾಣಿಗರಿಗೂ ಅದು ಇರಬೇಕಲ್ಲವೇ? ತನಗೆ ಓಟು ಹಾಕಿದ, ತನ್ನನ್ನು ಬೆಂಬಲಿಸಿದ, ಇಲ್ಲಿನ ಸಂವಿಧಾನ-ಪ್ರಜಾತಂತ್ರ, ಸಂಸ್ಕೃತಿ, ಅಭಿವೃದ್ಧಿಗಾಗಿ ದುಡಿಯುವ ಜನರ ಜೀವನ ಶೈಲಿಗೆ ಬೆಲೆ ಕೊಡದ ಖಟ್ಟರ್ ಅವರು ವಿದೇಶಿಯರ ಜೀವನ ಶೈಲಿಗೆ ಮಹತ್ವ ಕೊಡುವುದೇಕೆ? ವಿದೇಶಿಯರಿಗೆ ಲಭ್ಯವಾಗಿರುವುದನ್ನು ದೇಶೀಯರಿಗೆ ಅಲಭ್ಯಗೊಳಿಸುವುದು ಯಾವ ನೀತಿ? ಎಂಥ ದ್ವಂದ್ವ? ಗೋವು ಪೂಜನೀಯ ಪ್ರಾಣಿ, ಮಾಂಸದ ಪ್ರಾಣಿಯಲ್ಲ ಎಂಬ ಖಟ್ಟರ್ ಅವರ ನಿಲುವು ಪ್ರಾಮಾಣಿಕವೇ ಆಗಿರುತ್ತಿದ್ದರೆ ಸ್ವದೇಶಿ ಮತ್ತು ವಿದೇಶಿ ಎನ್ನದೇ ಸರ್ವರಿಗೂ ಗೋಮಾಂಸವನ್ನು ಅಲಭ್ಯಗೊಳಿಸಬೇಕಾಗಿತ್ತು. ಆ ಮೂಲಕ ಗೋಹತ್ಯೆಯನ್ನು ತಡೆಯುವಲ್ಲಿ ತನ್ನ ನಿಲುವು ಪ್ರಾಮಾಣಿಕವಾದುದು ಎಂದು ಸಾರಬೇಕಿತ್ತು. ಆದರೆ ಗುಜರಾತ್‍ನಲ್ಲಿ ವಿದೇಶಿಯರಿಗೆ ಮದ್ಯಪಾನ ಮಾಡಲು ಇರುವ ಪರವಾನಿಗೆಯನ್ನು ಎತ್ತಿಕೊಂಡು ಖಟ್ಟರ್ ಅವರು ತನ್ನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಹೀಗೆ ತನ್ನ ಗೋಪ್ರೇಮ ಎಷ್ಟು ನಕಲಿಯಾದುದು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಗೋವಿಗೂ ಮದ್ಯಪಾನಕ್ಕೂ ಎಲ್ಲಿಯ ಹೋಲಿಕೆ? ಗೋವಿನಂತೆ ಮದ್ಯವನ್ನು ಯಾರಾದರೂ ಪೂಜಿಸುತ್ತಾರಾ? ಗೋವಿಗಿರುವ ನೆಲೆ ಮತ್ತು ಬೆಲೆ ಮದ್ಯಪಾನಕ್ಕಿದೆಯೇ? ಆರೋಗ್ಯ ಮತ್ತು ಕೌಟುಂಬಿಕ ಕಾರಣಗಳನ್ನು ಮುಂದಿಟ್ಟುಕೊಂಡು ನಿಷೇಧಿಸಲಾದ ಮದ್ಯವನ್ನು, ಸಂಪೂರ್ಣ ಧಾರ್ಮಿಕ ಕಾರಣಕ್ಕಾಗಿ ನಿಷೇಧಿಸಲಾದ ಗೋಹತ್ಯೆಯೊಂದಿಗೆ ಹೋಲಿಸುವುದು ಎಷ್ಟು ಸರಿ? ಗೋವಿಗೆ ಖಟ್ಟರ್ ಅವರು ಕೊಡುತ್ತಿರುವ ಬೆಲೆಯೇ ಇದು?
ಅಂದಹಾಗೆ, ರಾಜಕಾರಣಿಗಳ ಮಟ್ಟಿಗೆ ಗೋವು ಅನುಕೂಲ ಸಿಂಧು ಪ್ರಾಣಿ. ಬಳಸಬೇಕಾದಲ್ಲಿ ಬಳಸಿ ಎಸೆಯಬೇಕಾದಲ್ಲಿ ಅವರು ಅದನ್ನು ಎಸೆದು ಬಿಡುತ್ತಾರೆ. ವಿಶೇಷ ಏನೆಂದರೆ, ಗೋವನ್ನು ಬಳಸುವಾಗ ಅವರಲ್ಲಿ ಧಾರ್ಮಿಕವಾದ ಮತ್ತು ಭಾವನಾತ್ಮಕವಾದ ಕಾರಣಗಳಿರುತ್ತವೆ. ಎಸೆಯುವಾಗ ಅತ್ಯಂತ ವ್ಯಾವಹಾರಿಕವಾದ ತರ್ಕಗಳಿರುತ್ತವೆ. ಖಟ್ಟರ್ ಅವರು ಇವತ್ತು ಅಂಥದ್ದೇ ಒಂದು ತರ್ಕವನ್ನು ತನ್ನ ‘ಎಸೆಯುವ ನೀತಿ’ಗೆ ಬಳಸಿಕೊಂಡಿದ್ದಾರೆ. ಅವರು ತನ್ನ ಈ ಹೊಸ ಗೋಮಾಂಸ ನೀತಿಯನ್ನು ಪ್ರಕಟಿಸುವುದಕ್ಕಿಂತ ಮೊದಲು ಜಪಾನ್‍ಗೆ ಭೇಟಿ ಕೊಟ್ಟಿದ್ದರು. ಅಲ್ಲಿನ ಸುಝುಕಿ ಕಂಪೆನಿಯ ಮುಖ್ಯಸ್ಥರೊಂದಿಗೆ ಭೇಟಿಯಾಗಿ ಹರ್ಯಾಣದಲ್ಲಿ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದರು. ಈ ದೇಶದ ಮುಂದುವರಿದ ರಾಜ್ಯಗಳಲ್ಲಿ ಹರ್ಯಾಣಕ್ಕೆ ಈಗ 14ನೇ ಸ್ಥಾನವಿದೆ. ಆ ಸ್ಥಾನವನ್ನು ಪ್ರಮುಖ 5 ಸ್ಥಾನಗಳೊಳಗೆ ತರಬೇಕೆಂಬ ಗುರಿ ಅವರದು. ಅದಕ್ಕಾಗಿ ಚೀನಾ, ಅಮೇರಿಕ, ಜಪಾನ್, ಕೆನಡದ ಉದ್ಯಮಿಗಳನ್ನು ಅವರು ಹರ್ಯಾಣದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದಾರೆ. ಸುಮಾರು 11 ಲಕ್ಷ ಕೋಟಿ ರೂಪಾಯಿಯ ಹೂಡಿಕೆ ಮಾಡುವ ಮತ್ತು 2 ಲಕ್ಷ ಉದ್ಯೋಗ ಸೃಷ್ಟಿಸುವ ಯೋಜನೆಯನ್ನು ಅವರು ಹಮ್ಮಿಕೊಂಡಿದ್ದಾರೆ. ಮುಖ್ಯವಾಗಿ, ಚೀನಾ ಮತ್ತು ಜಪಾನ್‍ಗಳು ಹರ್ಯಾಣದಲ್ಲಿ ಹೂಡಿಕೆ ಮಾಡುವ ಉಮೇದು ತೋರಿವೆ. ವಾಂಡ ಗುಂಪು ಸುಮಾರು 65 ಸಾವಿರ ಕೋಟಿ ರೂಪಾಯಿ ಹೂಡಿಕೆಗೆ ಈಗಾಗಲೇ ಸಮ್ಮತಿಸಿದೆ. ಅದಕ್ಕಾಗಿ 3 ಸಾವಿರ ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಅಟೋಮೊಬೈಲ್ ಮತ್ತು ಸೇವಾ ಕ್ಷೇತ್ರದಲ್ಲಿ ವಿದೇಶಿ ಕಂಪೆನಿಗಳು ಈಗಾಗಲೇ ಹರ್ಯಾಣದಲ್ಲಿ ಚಟುವಟಿಕೆಯಲ್ಲಿವೆ. ಮುಖ್ಯವಾಗಿ ಜಪಾನ್ ಮತ್ತು ಚೀನಿಯರ ಪ್ರಮುಖ ಆಹಾರವೇ ಗೋಮಾಂಸ. ಈ ಎರಡು ರಾಷ್ಟ್ರಗಳ ಪ್ರಮುಖ ಕಂಪೆನಿಗಳನ್ನು ಹರ್ಯಾಣದತ್ತ ಆಕರ್ಷಿಸಬೇಕಾದರೆ ಗೋಮಾಂಸ ನಿಷೇಧದಲ್ಲಿ ರಾಜಿ ಮಾಡಿಕೊಳ್ಳಲೇ ಬೇಕಾದ ಅನಿವಾರ್ಯತೆಯಿದೆ. ಆದ್ದರಿಂದಲೇ, ಖಟ್ಟರ್ ಅವರು ಗೋವು ಮತ್ತು 11 ಲಕ್ಷ ಕೋಟಿ ರೂಪಾಯಿಗಳನ್ನು ಮುಖಾಮುಖಿಗೊಳಿಸಿದ್ದಾರೆ. ಈ ಮುಖಾಮುಖಿಯಲ್ಲಿ ಗೋವು ಸೋಲೊಪ್ಪಿಕೊಂಡಿದೆ. ಸುಝುಕಿ, ವಾಂಡದಂಥ ದೈತ್ಯ ಕಂಪೆನಿಗಳು ಜಯಶಾಲಿಯಾಗಿವೆ. ಹಾಗಂತ, ಗೋವಿಗೆ ಮೋಸ ಮಾಡುವವರಲ್ಲಿ ಮನೋಹರ್ ಲಾಲ್ ಖಟ್ಟರ್ ಒಂಟಿಯಲ್ಲ. ಅವರ ಪಕ್ಷದವರಿಗೆ ಹೋಲಿಸಿದರೆ ಖಟ್ಟರ್ ತುಸು ಒಳ್ಳೆಯವರು. ತಾನು ಏನು ಎಂಬುದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಆದರೆ ಅವರ ಪಕ್ಷ ಅವರಷ್ಚೂ ಪ್ರಾಮಾಣಿಕವಾಗಿಲ್ಲ. ಒಂದು ಕಡೆ ಗೋಮಾಂಸ ನಿಷೇಧಕ್ಕೆ ಒತ್ತಾಯಿಸುತ್ತಾ ಇನ್ನೊಂದು ಕಡೆ ಈ ಹಿಂದಿಗಿಂತಲೂ ಹೆಚ್ಚು ಉತ್ಸಾಹದಿಂದ ವಿದೇಶಕ್ಕೆ ಗೋಮಾಂಸವನ್ನು ಅದು ರಫ್ತು ಮಾಡುತ್ತಿದೆ.
ಏನೇ ಆಗಲಿ, ಜಪಾನ್ ಮತ್ತು ಚೀನಾದ ಕೆಲವು ಉದ್ಯಮಿಗಳು ಮನೋಹರ್ ಲಾಲ್ ಖಟ್ಟರ್ ಅವರ ಗೋಪ್ರೇಮದ ನಿಜ ಮುಖವನ್ನು ಬಯಲುಗೊಳಿಸಿದ್ದಾರೆ. ಅವರಿಗೆ ಅಭಿನಂದನೆಗಳು.
Subscribe to:
Posts (Atom)


